ಗುರುವಾರ, ಜನವರಿ 1, 2026
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳು ಶೇ.50 ರಿಯಾಯಿತಿ ದರದಲ್ಲಿ ಮಾರಾಟ
ಬಳ್ಳಾರಿ,ಜ.01(ಕರ್ನಾಟಕ ವಾರ್ತೆ):
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂ.080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ಪಡೆಯಬಹುದಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರ ಹೊಂದಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in (ಆನ್ ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ