ಸೋಮವಾರ, ಜನವರಿ 26, 2026

ವಾರ್ತಾ ಇಲಾಖೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ಬಳ್ಳಾರಿ,ಜ.26(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಅವರಣದಲ್ಲಿ 77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ಕೋರಿದರು. ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ಹನುಮೇಶ್.ಹೆಚ್., ವಿಜಯಕುಮಾರ್.ಹೆಚ್., ರೋಜ ಮೇರಿ, ವಿ.ಹನುಮಂತು, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಪತ್ರಕರ್ತರಾದ ಪೀರಸಾಬ್, ಮುರಳಿಕಾಂತ ರಾವ್ ಇದ್ದರು. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ