ಸೋಮವಾರ, ಜನವರಿ 26, 2026

ಬಳ್ಳಾರಿ: ಜಿಲ್ಲಾಡಳಿತ ಕಚೇರಿಗಳಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ಬಳ್ಳಾರಿ,ಜ.26(ಕರ್ನಾಟಕ ವಾರ್ತೆ): ನಗರದ ಡಾ.ರಾಜ್‌ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನ ಮತ್ತು ರೈಲ್ವೇ ನಿಲ್ದಾಣ ರಸ್ತೆಯ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು 77ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಎರಡು ಕಚೇರಿಗಳ ಆವರಣದಲ್ಲಿ ಧ್ವಜಾರೋಹಣಾ ನೆರವೇರಿಸಿ, ಬಳಿಕ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಎಲ್ಲರಿಗೂ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಷಯ ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ತಹಶೀಲ್ದಾರ ಟಿ.ರೇಖಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ ಹಾಜರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ