ಗುರುವಾರ, ಜನವರಿ 1, 2026
ಹಿಂಗಾರು ಬೆಳೆ ಸಮೀಕ್ಷೆಯ ಖಾಸಗಿ ನಿವಾಸಿಗಳ ಆಪ್ ಬಿಡುಗಡೆ
ಬಳ್ಳಾರಿ,ಜ.01(ಕರ್ನಾಟಕ ವಾರ್ತೆ):
2025-26ನೇ ಸಾಲಿನ ಹಿಂಗಾರು ಹಂಗಾಮಿನ ಖಾಸಗಿ ನಿವಾಸಿಗಳಿಂದ ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿಯನ್ನು ಮೊಬೈಲ್ ಆಪ್‌ನಿಂದ ದಾಖಲಿಸಲು ಆಪ್ ಬಿಡುಗಡೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಬೆಳೆ ಸಮೀಕ್ಷೆ ನಡೆಸುವ ಕಾರ್ಯ 31 ಡಿಸೆಂಬರ್ 2025ರಂದು ಬೆಳೆ ಸಮೀಕ್ಷೆ ಚಾಲನೆಯಲ್ಲಿದ್ದು 30 ಜನವರಿ 2026ರಂದು ಬೆಳೆ ಸಮೀಕ್ಷೆ ಅಪ್‌ಲೋಡ್ ಮಾಡುವ ಕಾರ್ಯ ಕೊನೆಯ ದಿನವಾಗಿದೆ.
ಖಾಸಗಿ ನಿವಾಸಿಗಳು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ ಕ್ರಾಪ್ ಸರ್ವೇ ರಬಿ 2025 ಆಪ್‌ನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಕೆಳಗಿನ ಲಿಂಕ್ ಮೂಲಕ ಆಪ್‌ನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
https://play.google.com/store/apps/details?id=com.csk.PR_Kharif_2025.cropsurvey
ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿçÃಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿ ಉಪಯೋಗಿಸಲಾಗುತ್ತದೆ.
ಜಿಲ್ಲೆಯಲ್ಲಿ 293013 ಬೆಳೆ ತಾಕುಗಳಿದ್ದು, ಮೊಬೈಲ್ ಆಪ್ ನಲ್ಲಿ Geo Referenced and Digitized ಬೆಳೆಗ್ರಾಮ ನಕಾಶೆ ಅಳವಡಿಸಲಾಗಿರುವುದರಿಂದ ಆಯಾ ತಾಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ಬೆಳೆಯ ವಿವರಗಳನ್ನು ಎಲ್ಲಾ ಬೆಳೆಗಳ ವಿವಿರಗಳನ್ನು ಕಡ್ಡಾಯವಾಗಿ ದಾಖಲು ಮಾಡುವುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ