ಬುಧವಾರ, ಜನವರಿ 14, 2026
ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಬಳ್ಳಾರಿ,ಜ.14(ಕರ್ನಾಟಕ ವಾರ್ತೆ):
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬಳ್ಳಾರಿ ಜಿಲ್ಲಾ ಮಟ್ಟದ ಕ್ರೀಡಾ ಶಾಲೆ ಮತ್ತು ವಸತಿ ನಿಲಯಕ್ಕೆ 2026-27 ನೇ ಸಾಲಿನ ಪ್ರತಿಭಾವಂತ ಕ್ರೀಡಾಪಟುಗಳ ಪ್ರಥಮ ಹಂತದ ಹಿರಿಯ ಮತ್ತು ಕಿರಿಯ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳ ದೈಹಿಕ ಪರೀಕ್ಷೆ ನಡೆಸಲಾಗುವುದು. ಭಾಗವಹಿಸುವ ಕ್ರೀಡಾ ಪಟುಗಳು 7ನೇ ತರಗತಿ ಓದುತ್ತಿದ್ದು, 8ನೇ ತರಗತಿಗೆ ಪ್ರವೇಶ ಪಡೆಯುವವರು 14 ವರ್ಷದೊಳಗಿನವರು ಮತ್ತು 10ನೇ ತರಗತಿ ಓದುತ್ತಿದ್ದು, ಪಿಯುಸಿಗೆ ಪ್ರವೇಶ ಪಡೆಯುವವರು 18 ವರ್ಷದೊಳಗಿನವರಾಗಿರಬೇಕು.
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ವಯಸ್ಸಿನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನೊಂದಿಗೆ ಹಾಜರಾಗಬೇಕು. ಯಾವುದೇ ಪ್ರಯಾಣ ಭತ್ಯೆ ಮತ್ತು ದಿನಭತ್ಯೆ ನೀಡಲಾಗುವುದಿಲ್ಲ.
*ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿ:*
ಜ.17 ರಂದು ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣ, ಜ.20 ರಂದು ಕುರುಗೋಡು, ಜ.21 ರಂದು ಕಂಪ್ಲಿ, ಜ.22 ರಂದು ಸಿರುಗುಪ್ಪ, ಜ.23 ರಂದು ಸಂಡೂರು ಮತ್ತು ಜ.24 ರಂದು ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 11 ಗಂಟೆಯಿAದ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಪ್ರಥಮ ಹಂತದ ಆಯ್ಕೆಯಾದ ಕ್ರೀಡಾಪಟುಗಳು ಜ.30 ಮತ್ತು 31 ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ತರಬೇತುದಾರರಾದ ಎಂ.ಜಾಕೀರ್(ಮೊ.9449002715), ಮಹ್ಮದ್ ಮಸೂದ್ (ಮೊ. 9886688858) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ