ಶನಿವಾರ, ಜನವರಿ 31, 2026
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಜ.31(ಕರ್ನಾಟಕ ವಾರ್ತೆ):
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಫೆ.15 ರವರೆಗೆ ಪೋಷಕರು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿಯ ಮೇರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ