ಗುರುವಾರ, ಜನವರಿ 22, 2026

ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ: ಅರ್ಜಿ ಆಹ್ವಾನ

ಬಳ್ಳಾರಿ,ಜ.22(ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆಗಳ ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ವೆಬ್ ಸೈಟ್ https://ballari.nic.in ಅಥವಾ ಬಳ್ಳಾರಿ, ಸಂಡೂರು ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಯ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ, ಸಂಡೂರು ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ