ಮಂಗಳವಾರ, ಜನವರಿ 13, 2026
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಪ್ರವಾಸ ಕಾರ್ಯಕ್ರಮ
ಬಳ್ಳಾರಿ,ಜ.13(ಕರ್ನಾಟಕ ವಾರ್ತೆ):
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜ.14 ರಂದು ಬಳ್ಳಾರಿ ಪ್ರವಾಸ ಕೈಗೊಂಡಿದ್ದಾರೆ.
ಜ.14 ರಂದು ಬೆಳಿಗ್ಗೆ 09.30 ಕ್ಕೆ ಬೆಂಗಳೂರಿನಿAದ ವಿಶೇಷ ವಿಮಾನದ ಮೂಲಕ ತೋರಣಗಲ್ ನ ಜಿಂದಾಲ್ ಏರ್‌ಸ್ಟಿçಪ್ ಗೆ ಆಗಮಿಸುವರು. ಬಳಿಕ ಬೆಳಿಗ್ಗೆ 11.40 ಕ್ಕೆ ಬಳ್ಳಾರಿ ನಗರಕ್ಕೆ ಆಗಮಿಸಿ, ಮಧ್ಯಾಹ್ನ 12 ಗಂಟೆಗೆ ನಗರದ ರಾಯಲ್ ಫೋರ್ಟ್ ಹೋಟೆಲ್ ನಲ್ಲಿ ಕೇಂದ್ರ ಸರ್ಕಾರವು ನರೇಗಾ ಹೆಸರನ್ನು ಬದಲಾವಣೆ ಮಾಡಿರುವ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ಅನ್ಯಾಯವಾಗಿರುವ ಕುರಿತು ಪತ್ರಿಕಾಗೋಷ್ಠಿ ನಡೆಸುವರು.
ನಂತರ ಮಧ್ಯಾಹ್ನ 03 ಗಂಟೆಗೆ ವಿಜಯನಗರ ಜಿಲ್ಲೆಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ