ಮಂಗಳವಾರ, ಜನವರಿ 27, 2026

ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜ.27(ಕರ್ನಾಟಕ ವಾರ್ತೆ): ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರ್ ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು ಕ್ರೀಡೆ, ಸಂಗೀತ, ನೃತ್ಯ ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಅಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆ.20 ರೊಳಗಾಗಿ ಧಾರವಾಡ ಜಿಲ್ಲೆಯ ಲಕಮ್ಮನಹಳ್ಳಿಯ ಕೆಹೆಚ್‌ಬಿ ಕಾಲೋನಿಯ ಚಂದ್ರಕಾ ಲೇಔಟ್ ಹಿಂಭಾಗದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿ ಕಚೇರಿ, ಅಂಚೆ ವಿಳಾಸ-580004 ಕ್ಕೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಅರ್ಜಿಗಳನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಧಾರವಾಡ ಜಿಲ್ಲೆಯ ಕರ್ನಾಟಕ ಬಾಲವಿಕಾಸ ಅಕಾಡೆಮಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ