ಶುಕ್ರವಾರ, ಜನವರಿ 9, 2026
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಜಿಲ್ಲಾ ಪ್ರವಾಸ
ಬಳ್ಳಾರಿ,ಜ.09(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಜ.13 ರಂದು ಸಂಜೆ 5 ಗಂಟೆಗೆ ಕೂಡ್ಲಿಗಿಯಿಂದ ಸಂಡೂರಿಗೆ ಆಗಮಿಸಲಿದ್ದಾರೆ.
ಜ.14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಸಂಡೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಂಡೂರು ತಾಲ್ಲೂಕಿನ ಶಾಲಾ ಮಕ್ಕಳು, ಪೋಷಕರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರುಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಅದೇ ದಿನ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ವಿವಿಧ ವಸತಿ ಶಾಲೆಗಳ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸುವರು.
ಬಳಿಕ ಸಂಜೆ 05 ಗಂಟೆಗೆ ಕೋನ-ಮೇಳಕುಂದಾಕ್ಕೆ ಪ್ರಯಾಣಿಸುವರು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ