ಬುಧವಾರ, ಜನವರಿ 21, 2026

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಜ.21(ಕರ್ನಾಟಕ ವಾರ್ತೆ): ನಗರದ ಸಪ್ತಗಿರಿ ಫಂಕ್ಷನ್ ಹಾಲ್ ಹತ್ತಿರದ ಬಂಡಿಹಟ್ಟಿ ರಸ್ತೆಯ ಕೌಲ್ ಬಜಾರ್ ನಿವಾಸಿಯಾದ ಸಿಕಂದರ್ ಶೇಕ್ ಎನ್ನುವ 33 ವರ್ಷದ ವ್ಯಕ್ತಿ ಜ.07 ರಂದು ತನ್ನ ಮನೆಯಿಂದ ಹೋದವರು ವಾಪಸ್ ಬಾರದೇ ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5.8 ಅಡಿ, ಸಾಧಾರಣ ಮೈ ಕಟ್ಟು, ಎಣ್ಣೆಗೆಂಪು ಮೈ ಬಣ್ಣ, ದುಂಡು ಮುಖ, ಬಲ ಹುಬ್ಬಿನ ಮೇಲೆ ಹಳೆ ಗಾಯದ ಕಲೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ನೈಟ್ ಪ್ಯಾಂಟ್ ಮತ್ತು ನೀಲಿ ಬಣ್ಣದ ತುಂಬು ತೋಳಿನ ಅಂಗಿ ಧರಿಸಿರುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಕೌಲ್ ಬಜಾರ್ ಪೊಲೀಸ್ ಠಾಣೆಯ ಪಿಐ ಮೊ.9480803047, ಪಿ.ಎಸ್.ಐ ಮೊ.94808203084, 9480803085 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ