ಶನಿವಾರ, ಜನವರಿ 3, 2026

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ: ಸಾಧನೆ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ,ಜ.03(ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿಗೆ ಸಾಧನೆ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಹ ವಿಶೇಷಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿಶೇಷ ಚೇತನ ಫಲಾನುಭವಿಗಳು ಆನ್‌ಲೈನ್ ಸೇವಾಸಿಂಧು ತಂತ್ರಾAಶದ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಅಥವಾ ನೇರವಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ https://sevasindhuservivices.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ಜೆರಾಕ್ಸ್ ಪ್ರತಿಯ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು: ಬಳ್ಳಾರಿ, ಕಂಪ್ಲಿ-8880875620, ಸಿರುಗುಪ್ಪ-9743509698, ಸಂಡೂರು-9632052270, ಕುರುಗೋಡು-9538000887 ಅಥವಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂö್ಯ ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂö್ಯಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ