ಸೋಮವಾರ, ಜನವರಿ 5, 2026
ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜ.05(ಕರ್ನಾಟಕ ವಾರ್ತೆ):
2025 ರಲ್ಲಿ ಪ್ರಥಮ ಬಾರಿಗೆ ಮುದ್ರಣವಾಗಿ ಪ್ರಕಟವಾದÀ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಪುಸ್ತಕ ಆಯ್ಕೆಗಾಗಿ ಸಲ್ಲಿಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಪುಸ್ತಕಗಳನ್ನು ಆಹ್ವಾನಿಸಿದ್ದು, ಆಸಕ್ತ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಮಾರಾಟಗಾರರು ಪುಸ್ತಕಗಳನ್ನು ಸಲ್ಲಿಸಬಹುದಾಗಿದೆ.
ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜ.31 ರ ಸಂಜೆ 5.30 ರೊಳಗಾಗಿ ನೋಂದಣಿ ಮಾಡಿಸಬಹುದಾಗಿದೆ. ಈ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಹೊರ ರಾಜ್ಯಗಳಲ್ಲಿ 2025 ರಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟವಾಗುವ ಆಂಗ್ಲ, ಹಿಂದಿ ಅಥವಾ ಯಾವುದೇ ಭಾಷೆಯ ಪುಸ್ತಕಗಳನ್ನೂ ಸಹ ಆಹ್ವಾನಿಸಿದೆ. ಆಯಾ ರಾಜ್ಯ ಕೇಂದ್ರ ಗ್ರಂಥಾಲಯಗಳಲ್ಲಿ ಅಥವಾ ಕೇಂದ್ರ/ಆಯಾ ರಾಜ್ಯ ಸರ್ಕಾರಗಳಿಂದ ಅಧಿಸೂಚಿಸಲ್ಪಟ್ಟ ಅಧಿಕೃತ ಪುಸ್ತಕ ನೋಂದಣಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸತಕ್ಕದ್ದು.
ನೋಂದಣಿ ಪ್ರಮಾಣ ಪತ್ರದ ನಕಲು ಪತ್ರದ ಪ್ರತಿಯೊಂದಿಗೆ ಮತ್ತು ಆಯಾ ಪುಸ್ತಕದ ಒಂದು ಪ್ರತಿಯನ್ನು ಜ.31 ರ ಸಂಜೆ 5.30 ರೊಳಗಾಗಿ ಆಯ್ಕೆಗಾಗಿ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ಸಲ್ಲಿಸತಕ್ಕದ್ದು. ತಡವಾಗಿ ಸಲ್ಲಿಸುವ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ.
ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ಅಂತರ್ಜಾಲ dpl.karnataka.gov.in ಮತ್ತು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಆಯುಕ್ತರ ಕಚೇರಿ ದೂ.080-22864990, 22867358 ಮತ್ತು ರಾಜ್ಯ ಕೇಂದ್ರ ಗ್ರಂಥಾಲಯದ ದೂ.080-22212128 ಗೆ ಕರೆಮಾಡಿ ಸಂಪರ್ಕಿಸಬಹುದು ಎಂದು ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ