ಶುಕ್ರವಾರ, ಜನವರಿ 23, 2026

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ: ಪ್ರಸ್ತಾವನೆಗಳಿಗೆ ಆಹ್ವಾನ

ಬಳ್ಳಾರಿ,ಜ.23(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಆರೈಕೆ, ರಕ್ಷಣೆ, ಸಂರಕ್ಷಣೆ ಮಾಡುತ್ತಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೋಂದಣಿ ಮಾಡಿಕೊಂಡ 03 ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸುತ್ತಾ ಬಂದಿರುವ ಸ್ವಯಂ ಸೇವಾ ಸಂಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಜಿಲ್ಲಾ ಮಟ್ಟದ ಕೇಂದ್ರದಲ್ಲಿ 01 ಸಂಸ್ಥೆಗೆ ಹಾಗೂ ಕಂದಾಯ ಉಪವಿಭಾಗ ಮಟ್ಟದ ತಾಲ್ಲೂಕು ಕೇಂದ್ರಗಳಲ್ಲಿ 01 ಸಂಸ್ಥೆಗೆ ರಾಜ್ಯ ವಲಯದ ಅನುದಾನದಡಿ ಅನುದಾನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಂತಹ ಸ್ವಯಂ ಸೇವಾ ಸಂಸ್ಥೆಗಳು ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಪಡೆದು ಸಂಸ್ಥೆಯ ದಾಖಲಾತಿಗಳೊಂದಿಗೆ ಪ್ರಸ್ತಾವನೆಯನ್ನು ಫೆ.06 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-267886, ಮೊ.9972813152 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ