ಮಂಗಳವಾರ, ಜನವರಿ 6, 2026
ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜ.06(ಕರ್ನಾಟಕ ವಾರ್ತೆ):
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಕೃಷಿ ಮೇಳದ ಪ್ರಯುಕ್ತ ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು 2026ರ ಜನವರಿ ತಿಂಗಳಿನಲ್ಲಿ ರಾಯಚೂರು ಮುಖ್ಯ ಆವರಣದಲ್ಲಿ “ಕೃಷಿ ಮೇಳ”ವನ್ನು ಆಯೋಜಿಸುತ್ತಿದ್ದು, ಕೃಷಿಗೆ ಸಂಬAಧಿಸಿದ ಹೊಸ ತಂತ್ರಜ್ಞಾನಗಳ ಬಗ್ಗೆ ರೈತ ಬಾಂಧವರಿಗೆ ಮಾಹಿತಿ ಒದಗಿಸುವುದು ಹಾಗೂ ಅವುಗಳನ್ನು ಅಳವಡಿಸಲು ಪ್ರೇರೇಪಿಸುವ ಉದ್ದೇಶ ಈ ಮೇಳದ್ದಾಗಿದೆ.
ಈ ಮೇಳದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ಜಿಲ್ಲಾವಾರು ಶ್ರೇಷ್ಠ ಕೃಷಿಕ ಹಾಗೂ ಕೃಷಿ ಮಹಿಳೆಯನ್ನು ಗುರುತಿಸಿ ಪ್ರಮಾಣ ಪತ್ರವನ್ನು ನೀಡಿ ಸನ್ಮಾನಿಸಲಾಗುತ್ತದೆ.
ಆಸಕ್ತರು ಅರ್ಜಿ ನಮೂನೆಯನ್ನು ಆನ್ ಲೈನ್ ವೆಬ್ ಸೈಟ್ https://uasraichur.karnataka.gov.in ನಲ್ಲಿ ಅಥವಾ ಬಳ್ಳಾರಿಯ ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜ.16 ರ ಸಂಜೆ 05 ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.9480696314, 9480696315, 9480696316, 9480696334, 9480696335, 9480696336 ಗೆ ಸಂಪರ್ಕಿಸಬಹುದು ಎಂದು ರಾಯಚೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ