ಸೋಮವಾರ, ಜನವರಿ 5, 2026
ವ್ಯಕ್ತಿ ಕಾಣೆ ಪತ್ತೆಗೆ ಮನವಿ
ಬಳ್ಳಾರಿ,ಜ.05(ಕರ್ನಾಟಕ ವಾರ್ತೆ):
ನಗರದ ಸಿರುಗುಪ್ಪ ರಸ್ತೆಯ ಅವ್ವಂಬಾವಿಯ 33ನೇ ವಾರ್ಡ್ ಅಂಬಾದೇವಿ ದೇವಸ್ಥಾನದ ಹತ್ತಿರದ ಜಿಲಾನಿ ಲೇಔಟ್ ನ ನಿವಾಸಿಯಾದ ವೆಂಕಟೇಶ್ ಎನ್ನುವ 50 ವರ್ಷದ ವ್ಯಕ್ತಿಯು 2025ರ ಡಿ.30 ರಂದು ಕಾಣೆಯಾಗಿರುವ ಕುರಿತು ಎ.ಪಿ.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ:
ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಅರ್ಧ ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಮತ್ತು ಹಳದಿ ಬಣ್ಣದ ಜಾಕೆಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ