ಬುಧವಾರ, ಜನವರಿ 28, 2026

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಮೂರು ದಿನಗಳ ಪುಸ್ತಕ ಮೇಳಕ್ಕೆ ಚಾಲನೆ

ಬಳ್ಳಾರಿ,ಜ.28(ಕರ್ನಾಟಕ ವಾರ್ತೆ): ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕೇಂದ್ರ ಗ್ರಂಥಾಲಯದಲ್ಲಿ ಜ.28 ರಿಂದ 30 ರ ವರೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ಪುಸ್ತಕ ಮೇಳಕ್ಕೆ ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅವರು ಬುಧವಾರ ಚಾಲನೆ ನೀಡಿದರು. ಪುಸ್ತಕ ಪ್ರದರ್ಶನದಲ್ಲಿ 13 ವಿವಿಧ ಪುಸ್ತಕ ಮಳಿಗೆಗಳು ಭಾಗವಹಿಸಿದ್ದು, ಪುಸ್ತಕ ಪ್ರದರ್ಶನವು ಬೆಳಿಗ್ಗೆ 10 ರಿಂದ ಸಂಜೆ 5.30 ರ ವರೆಗೆ ಮೂರು ದಿನಗಳವರೆಗೆ ಜರುಗಲಿದೆ. ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಈ ವೇಳೆ ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಜೆ., ಗ್ರಂಥಪಾಲಕ ಡಾ.ಮಾರಣ್ಣ ಓ ಸೇರಿದಂತೆ ವಿವಿಯ ವಿವಿಧ ನಿಕಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ