ಸೋಮವಾರ, ಜನವರಿ 12, 2026
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಜ.12(ಕರ್ನಾಟಕ ವಾರ್ತೆ)
ತಾಲ್ಲೂಕಿನ ಬಿ.ಗೋನಾಳು ಗ್ರಾಮದ ವಿ.ಚೆನ್ನರೆಡ್ಡಿ ಫಂಕ್ಷನ್ ಹಾಲ್ ಹತ್ತಿರದ ನಿವಾಸಿ ಸಿ.ಹೆಚ್.ಯುವರಾಜ್ ಎನ್ನುವ ಯುವಕ ಜ.06 ರಂದು ತಮ್ಮ ಮನೆಯಿಂದ ಕಾಣೆಯಾಗಿದ್ದು, ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಯುವಕನ ಚಹರೆ:
ಎತ್ತರ 5.6 ಅಡಿ, ಕಪ್ಪನೆ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಮತ್ತು ಇಂಗ್ಲಿಷ್ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಹಣೆಯ ಮೇಲೆ ಹಳೆ ಗಾಯದ ಗುರುತು ಇರುತ್ತವೆ.
ಕಾಣೆಯಾದ ಯುವಕನ ಸುಳಿವು ಸಿಕ್ಕಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ದೂ.08392-250033, ಮೊ.948080396 ಅಥವಾ ಪೊಲೀಸ್ ಕಂಟ್ರೋಲ್ ರೂಂ. ಬಳ್ಳಾರಿ ದೂ.08392258100 ಗೆ ಮಾಹಿತಿ ನೀಡಬೇಕು ಎಂದು ಪ್ರಕಟಣೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ