ಮಂಗಳವಾರ, ಜನವರಿ 20, 2026

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜ.20(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲ್ಲೂಕಿನ ಹಚ್ಚೋಳ್ಳಿ ಗ್ರಾಮ ನಿವಾಸಿಯಾದ ಜಿ.ಶಿವುರಾಜ ಎನ್ನುವ 50 ವರ್ಷದ ವ್ಯಕ್ತಿ 2025ರ ಡಿ.29 ರಂದು ಕಾಣೆಯಾಗಿರುವ ಕುರಿತು ಹಚ್ಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5.2, ಗೋಧಿ ಮೈ ಬಣ್ಣ ,ಕೋಲು ಮುಖ, ಕಪ್ಪು ಕೂದಲು, ಕನ್ನಡ, ಭಾಷೆ ಮಾತನಾಡುತ್ತಾನೆ. ವ್ಯಕ್ತಿ ಕಾಣೆಯಾದ ಸಂದರ್ಭದಲ್ಲಿ ಉದ್ದ ತೋಳಿನ ಬಿಳಿ ಗೆರೆಯ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ವ್ಯಕ್ತಿಯ ಸುಳಿವು ಮಾಹಿತಿ ಸಿಕ್ಕಲ್ಲಿ ಹಚ್ಚೊಳ್ಳಿ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ