ಬುಧವಾರ, ಜನವರಿ 21, 2026

ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ: ಅರ್ಜಿ ಆಹ್ವಾನ

ಬಳ್ಳಾರಿ,ಜ.21(ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆ ವತಿಯಿಂದ 2025-26 ಸಾಲಿನ ಜಿಲ್ಲಾ ವಲಯ ಫಲಾನುಭವಿ ಆಧಾರಿತ ಯೋಜನೆಯಡಿ ಒಟ್ಟು ಗುರಿ 79 ಮೀನುಗಾರರಿಗೆ ಮೀನುಗಾರಿಕೆ ಸಲಕರಣೆಗಳ ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ವೆಬ್ ಸೈಟ್ https://ballari.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನ. 79 ಫಲಾನುಭವಿಗಳಿಗೆ ಒಟ್ಟು ಮೂರು ಸುತ್ತಿನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 79 ಕ್ಕಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ಲಾಟರಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ