ಶುಕ್ರವಾರ, ಜನವರಿ 2, 2026
ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬಿ.ವೆಂಕಟ್ ಸಿಂಗ್ ಅವರ ಬಳ್ಳಾರಿ ಪ್ರವಾಸ
ಬಳ್ಳಾರಿ,ಜ.02(ಕರ್ನಾಟಕ ವಾರ್ತೆ):
ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ಜ.03 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅವರು ಜ.02 ರಂದು ಮಧ್ಯಾಹ್ನ ಬೆಂಗಳೂರಿನಿAದ ಹೊರಟು, ರಾತ್ರಿ ಬಳ್ಳಾರಿಗೆ ಆಗಮಿಸಿ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ನಂತರ ಜ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರೊAದಿಗೆ ಏರ್ಪಡಿಸಿರುವ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ವಾಸ್ತವ್ಯ ಮಾಡಿ, ಜ.04 ರಂದು ಸಿಂಧನೂರಿಗೆ ಪ್ರಯಾಣಿಸುವರು ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ