ಬುಧವಾರ, ಜನವರಿ 14, 2026
ಸಂಡೂರು: ನಾರಿಹಳ್ಳ ಜಲಾಶಯದಲ್ಲಿ ಮೀನುಮರಿ ಬಿತ್ತನೆ
ಬಳ್ಳಾರಿ,ಜ.14(ಕರ್ನಾಟಕ ವಾರ್ತೆ):
ಜಿಲ್ಲೆಯ ಸಂಡೂರು ತಾಲ್ಲೂಕಿನ ನಾರಿಹಳ್ಳ ಜಲಾಶಯಕ್ಕೆ ರಾಜ್ಯ ವಲಯ ಯೋಜನೆಯಡಿ 5.80 ಲಕ್ಷ ಬಲಿತ ಬಿತ್ತನೆ ಮೀನುಮರಿಗಳನ್ನು ಮಂಗಳವಾರ ದಾಸ್ತಾನು ಮಾಡಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಮೀನುಗಾರಿಕೆ ಜಂಟಿ ನಿರ್ದೇಶಕ ಶರಣಬಸವ, ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ತಾರನಗರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಂಪಾಪತಿ, ಸಂಡೂರು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ ಕೆ.ಎಸ್ ಸೇರಿದಂತೆ ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು, ಪರವಾನಿಗೆದಾರರು ಹಾಜರಿದ್ದರು.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ