ಮಂಗಳವಾರ, ಜನವರಿ 27, 2026

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

ಬಳ್ಳಾರಿ,ಜ.27(ಕರ್ನಾಟಕ ವಾರ್ತೆ): ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2024 ನೇ ಸಾಲಿನ (ಜನವರಿ-2024 ರಿಂದ ಡಿಸೆಂಬರ್-2024) ಹಾಗೂ 2025 ನೇ (ಜನವರಿ-2025 ರಿಂದ ಡಿಸೆಂಬರ್-2025) ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ” ಪ್ರದಾನ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ವಿವಿಧ ಪ್ರಕಾರ ಪುಸ್ತಕಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024ನೇ ಸಾಲಿನ ಹಾಗೂ 2025ನೇ ಸಾಲಿನ ಅವಧಿಯಲ್ಲಿ (ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿ) ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು), ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಹಾಗಾಗಿ ಮೇಲ್ಕಾಣಿಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕೆಂಬುವುದರ ಬಗ್ಗೆ ಸ್ಪಷ್ಟವಾಗಿ ನಮೂದಿಸಲು ತಿಳಿಸಿದೆ. ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಫೆ.20 ರೊಳಗಾಗಿ ಧಾರವಾಡ ಜಿಲ್ಲೆಯ ಲಕಮ್ಮನಹಳ್ಳಿಯ ಕೆಹೆಚ್‌ಬಿ ಕಾಲೋನಿಯ ಚಂದ್ರಕಾ ಲೇಔಟ್ ಹಿಂಭಾಗದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿ ಕಚೇರಿ, ಅಂಚೆ ವಿಳಾಸ-580004 ಕ್ಕೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ.0836-2465490, ಮೊ.8050392209, 7204396275, 9448981944 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ