ಬುಧವಾರ, ಜನವರಿ 28, 2026
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಸೂಕ್ತ ದತ್ತಾಂಶ ನೀಡಿ ನವೀಕರಿಸಿಕೊಳ್ಳಲು ಸೂಚನೆ
ಬಳ್ಳಾರಿ,ಜ.28(ಕರ್ನಾಟಕ ವಾರ್ತೆ):
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದಡಿ 2020-21, 2021-22, 2022-23, 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ಸೂಕ್ತ ದತ್ತಾಂಶ ಲಭ್ಯವಿಲ್ಲದೇ ಪಾವತಿ ಮಾಡಲು ಬಾಕಿ ಇರುವ ವಿದ್ಯಾರ್ಥಿಗಳಿಗೆ ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಆಧಾರ್, ಕೌನ್ಸೆಲಿಂಗ್ ವಿವರ ಹಾಗೂ ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ದತ್ತಾಂಶದ ಮಾಹಿತಿ ನವೀಕರಿಸಿಕೊಳ್ಳಬೇಕು.
ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಮೂಲಕ ಅರ್ಜಿ ಸಲ್ಲಿಸಿರುವ ಕೆಲ ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿವೇತನ/ಶುಲ್ಕ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಕೊಳ್ಳದೇ ಇರುವುದು. ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶದಲ್ಲಿ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ ನಮೂದಿಸಿರುವ ಹೆಸರಿಗೂ ವ್ಯತ್ಯಾಸವಿರುವುದು.
ಕೌನ್ಸೆಲಿಂಗ್ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೌನ್ಸೆಲಿಂಗ್ ದತ್ತಾಂಶ ನಮೂದಿಸದೇ ಇರುವುದು. ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ವರ್ಷದ ದತ್ತಾಂಶವನ್ನು ವಿಶ್ವವಿದ್ಯಾಲಯಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದೊAದಿಗೆ ಹಂಚಿಕೊಳ್ಳದೇ ಇರುವುದು.
ವಿದ್ಯಾರ್ಥಿಗಳು ಮೇಲ್ಕಂಡ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಸೂಕ್ತ ಮಾಹಿತಿಯನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ವಿದ್ಯಾರ್ಥಿಗಳ ಲಾಗಿನ್, ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಲಾಗಿನ್ ನಲ್ಲಿ ಅಪ್‌ಡೇಟ್ ಮಾಡಲು ಜ.30 ರ ವರೆಗೆ ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಅಪ್‌ಡೇಟ್ ಮಾಡದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.
-----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ