ಗುರುವಾರ, ಜನವರಿ 29, 2026
ಕುರೇಕುಪ್ಪ ಪುರಸಭೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜ.29(ಕರ್ನಾಟಕ ವಾರ್ತೆ):
ಕುರೇಕುಪ್ಪ ಪುರಸಭೆ ವತಿಯಿಂದ ಎಸ್‌ಸಿಎಸ್‌ಪಿ ಯೋಜನೆಯಡಿ 2019-2020 ನೇ ಸಾಲಿನ ಬಾಕಿ ಉಳಿದ ಮೊತ್ತದಲ್ಲಿ ಪಕ್ಕಾ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
*ಬೇಕಾದ ದಾಖಲೆ:*
ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ, ಮನೆ/ನಿವೇಶನಕ್ಕೆ ಸಂಬAಧಿಸಿದ ತೆರಿಗೆ ರಶೀದಿ, ನಮೂನೆ-03, ಹಕ್ಕು ಪತ್ರ, ನೋಂದಾಯಿತ ದಾಖಲೆ ಪತ್ರಗಳ ಜೆರಾಕ್ಸ್ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಫೆ.18 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಾರ್ಯಾಲಯ ಅಥವಾ ದೂ.08395-295601 ಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ