ಬುಧವಾರ, ಜನವರಿ 14, 2026
ಮಹಿಳೆ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಜ14.(ಕರ್ನಾಟಕ ವಾರ್ತೆ):
ನಗರದ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿದ್ದಮ್ಮ ಎನ್ನುವ 61 ವರ್ಷದ ಮಹಿಳೆ 2025ರ ಸೆ.02 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಮಹಿಳೆಯ ಚಹರೆ:
ಎತ್ತರ ಸುಮಾರು 4.9 ಅಡಿ, ದೃಢವಾದ ಮೈಕಟ್ಟು, ಗೋಧಿ ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಮೆರೂನ್ ರೆಡ್ ಕಲರ್ ಸೀರೆ ಧರಿಸಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ 100, ಎಸ್.ಪಿ ಕಚೇರಿ ದೂ.08392-258400, ಬಳ್ಳಾರಿ ನಗರ ಡಿ.ಎಸ್.ಪಿ ಕಚೇರಿ ದೂ.08392-27232, ಮೊ.9480803020, ಮಹಿಳಾ ಪೊಲೀಸ್ ಠಾಣೆಯ ದೂ.08392-268108 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ