ಸೋಮವಾರ, ಜನವರಿ 12, 2026

ವೃದ್ಧ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಜ.12(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿಹಟ್ಟಿಯ ರಾಮುಲಮ್ಮ ದೇವಸ್ಥಾನದ ಹತ್ತಿರದ ನಿವಾಸಿಯಾದ ದೊಡ್ಡ ಹುಚ್ಚಪ್ಪ ಎನ್ನುವ 70 ವರ್ಷದ ವೃದ್ಧ ಜ.03 ರಂದು ಕಾಣೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ: ಅಂದಾಜು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ ಹೊಂದಿದ್ದು, ಬಿಳಿ ಗಡ್ಡ, ಮೀಸೆ ಬಿಟ್ಟಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ರೆಡಿಮೇಡ್ ಅಂಗಿ, ಖಾಕಿ ಬಣ್ಣದ ಉಲನ್ ಸ್ವೇಟರ್, ನೀಲಿ ಬಣ್ಣದ ಚೆಕ್ಸ್ ಟವೆಲ್, ನೀಲಿ ಬಣ್ಣದ ಚೆಕ್ಸ್ ಲುಂಗಿ ಹಾಗೂ ಒಳ ಉಡುಪು ಧರಿಸಿರುತ್ತಾನೆ. ಕಾಣೆಯಾದ ವೃದ್ಧನ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್‌ಐ ಮೊ.94808203084, 9480803085, ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ