ಸೋಮವಾರ, ಜನವರಿ 26, 2026

ಬಿಎಂಸಿಆರ್‌ಸಿ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಸಚಿವ ರಹೀಂ ಖಾನ್ ಅವರಿಂದ ಗೌರವ ನಮನ

ಬಳ್ಳಾರಿ,ಜ.26(ಕರ್ನಾಟಕ ವಾರ್ತೆ): 77ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಮುಂಭಾಗದ ಆವರಣದಲ್ಲಿರುವ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಬಿಎಂಸಿಆರ್‌ಸಿ ನಿರ್ದೇಶಕ ಡಾ.ಗಂಗಾಧರ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ