ಶನಿವಾರ, ಜನವರಿ 3, 2026

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಪ್ರವಾಸ ಕಾರ್ಯಕ್ರಮ

ಬಳ್ಳಾರಿ,ಜ.03(ಕರ್ನಾಟಕ ವಾರ್ತೆ): ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜ.04 ರಂದು ಬಳ್ಳಾರಿ ಪ್ರವಾಸ ಕೈಗೊಂಡಿದ್ದಾರೆ. ಜ.04 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಅಂತರಾಷ್ಟಿçÃಯ ವಾಣಿಜ್ಯ ಮೇಳ 2026 ರ ಅಂಗವಾಗಿ ರಾಷ್ಟಿçÃಯ ಆಹಾರ ಭದ್ರತಾ ಹಾಗೂ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟ ತಾಂತ್ರಿಕ ಕಾರ್ಯಾಗಾರ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಕರ್ನಾಟಕ ಗÀಣಿಭಾದಿತ ಪುನಃಶ್ಚೇತನ ಅಭಿವೃದ್ಧಿ ನಿಗಮ ಯೋಜನೆಯಡಿ ಗಣಿಭಾದಿತ ಬಳ್ಳಾರಿ ತಾಲ್ಲೂಕಿನ 10 ಗ್ರಾಮಗಳ 862 ವಸತಿ ರಹಿತರಿಗೆ ವಸತಿ ಒದಗಿಸಲು ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಸಚಿವರು ಮಧ್ಯಾಹ್ನ 01 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ