ಸೋಮವಾರ, ಜನವರಿ 19, 2026

ಬಳ್ಳಾರಿ: ಸಂಭ್ರಮದ ಮಹಾಯೋಗಿ ವೇಮನ ಜಯಂತ್ಯೋತ್ಸವ ಮಹನೀಯರ ದಾರ್ಶನಿಕ ಬದುಕುಗಳನ್ನು ತಿಳಿಸುವ ಕಾರ್ಯ ಸರ್ಕಾರ ಮಾಡುತ್ತಿದೆ: ಮೇಯರ್ ಪಿ.ಗಾದೆಪ್ಪ

ಬಳ್ಳಾರಿ,ಜ.19(ಕರ್ನಾಟಕ ವಾರ್ತೆ): ಮಹನೀಯರ ಆದರ್ಶ ಬದುಕು, ಅವರ ತತ್ವಗಳನ್ನು ಈಗಿನ ಯುವಜನತೆಗೆ ತಲುಪಿಸಲು ಮತ್ತು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸುವಲ್ಲಿ ರಾಜ್ಯ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಯಂತಿ ಕಾರ್ಯಕ್ರಮಗಳು ಸಾಮಾಜಿಕ ಏಕತೆ ಮತ್ತು ಪ್ರಗತಿಯನ್ನು ಸಾಧಿಸಲು ಪ್ರೇರಣೆ ನೀಡುವ ಕಾರ್ಯಕ್ರಮಗಳಾಗಿವೆ. ಹಾಗಾಗಿ ಮಹನೀಯರ ಆದರ್ಶಗಳನ್ನು ಪಾಲಿಸಿ, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆದಾಗ ಮಾತ್ರ ಮಹನೀಯರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಕನ್ನಡದಲ್ಲಿ ಸರ್ವಜ್ಞ ಮತ್ತು ತಮಿಳಿನಲ್ಲಿ ತಿರುವಳ್ಳುವರ್ ಅವರಂತೆ ತೆಲುಗಿನಲ್ಲಿ ಶ್ರೇಷ್ಠ ಮತ್ತು ಮಹಾಕವಿ ಎಂದರೆÀ ಮಹಾಯೋಗಿ ವೇಮನರು. ಜನಸಾಮಾನ್ಯರ ಕವಿ, ಜೀವಕಾರುಣ್ಯದ ಕವಿ, ಲೋಕಕ್ಕೆ ಮಾರ್ಗದರ್ಶಿಯಾಗಿದ್ದ ಮತ್ತು ತಮ್ಮ ಜೀವಿತಾವಧಿಯ ಕಾಲಘಟ್ಟದಲ್ಲಿ ಜಾತೀಯತೆ, ಅಂಧಶ್ರದ್ಧೆ, ಮೇಲುಕೀಳುಗಳನ್ನು ತಮ್ಮ ಪದ್ಯಗಳ ಮೂಲಕ ಧಿಕ್ಕರಿಸಿದವರು ಮಹಾಯೋಗಿ ವೇಮನರು ಎಂದು ಹೇಳಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮಲಪನಗುಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶೇಖರ ಗಿರಡ್ಡಿ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ವೇಮನರು ಆಂಧ್ರಪ್ರದೇಶದ ಮೂಗಚಿಪಲ್ಲಿಯ ಕೋಮಗಿರಿ ವೇಮ ಭೂಪಾಲ ಮತ್ತು ಮಲ್ಲಮಾಂಬೆ ಎಂಬ ದಂಪತಿಯ ಮಗನಾಗಿ ಜನಿಸಿದರು. 1412- 1480ರ ನಡುವೆ ಅಂದಾಜು 68 ವರ್ಷ ಬದುಕಿದ್ದ ವೇಮನ ಮಹಾಕವಿ, ಜೀವನವೆಂಬ ಸಂತೆಯೊಳಗಿದ್ದುಕೊAಡೇ ಸಂತರಾಗಿ, ಮಹಾಂತರಾಗಿ ಬೆಳೆದವರು. 15ನೇ ಶತಮಾನದ ತೆಲುಗು ಭಾಷೆಯ ಅನುಭವಿ ವಚನಕಾರ ಮತ್ತು ಸಮಾಜ ಸುಧಾರಕರಾಗಿದ್ದರು ಎಂದರು. ನಾಡಿನ ತುಂಬೆಲ್ಲ ಸಂಚರಿಸಿ, ಲೋಕಜ್ಞಾನವನ್ನು ಹರಡುವ ಮೂಲಕ ತಮ್ಮ ಸಾಧನೆಯಿಂದ ಮಹಾಯೋಗಿಯಾಗುತ್ತಾರೆ. ಯೌವ್ವನದ ಆರಂಭದ ದಿನಗಳಲ್ಲಿ ಸ್ವೇಚ್ಛಾಜೀವನ ನಡೆಸುತ್ತಿದ್ದ ವೇಮನರು ಜ್ಞಾನೋದಯ ಪಡೆದು ದಾರ್ಶನಿಕ ಕವಿ, ಅನುಭವಿಯಾಗಿ ರೂಪುಗೊಂಡರು ಎಂದು ತಿಳಿಸಿದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂವಿಧಾನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಕು.ನಿಹಾರಿಕಾ.ಇ ಅವರು ಭರತನಾಟ್ಯ ಪ್ರದರ್ಶಿಸಿದರೆ, ವಿದ್ಯಾರ್ಥಿನಿ ಹಿಮಬಿಂದು ಅವರು ಗಾಂಧಾರಿ ಕಲೆ ಪ್ರದರ್ಶಿಸಿ, ಸಾರ್ವಜನಿಕರ ಚಪ್ಪಾಳೆ ಗಿಟ್ಟಿಸಿಕೊಂಡರು. ದೊಡ್ಡಬಸಪ್ಪ ಗವಾಯಿ ತಂಡ ಭಕ್ತಿ ಸಂಗೀತ ಹಾಗೂ ವೇಮನ ಪದ್ಯಗಳನ್ನು ಗಾಯನದ ಮೂಲಕ ಪ್ರಸ್ತುತಪಡಿಸಿದರು. *ಸಂಭ್ರಮದ ಮೆರವಣಿಗೆ:* ಮಹಾಯೋಗಿ ವೇಮನ ಜಯಂತಿ ಅಂಗವಾಗಿ ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು. ಮಹಾಯೋಗಿ ವೇಮನರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆಗೈಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ರೆಡ್ಡಿ ಜನ ಸಂಘ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ- ರೈಲ್ವೇ ನಿಲ್ದಾಣ ರಸ್ತೆ- ಹಳೆ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ- ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಿತು. ಈ ವೇಳೆ ಬಳ್ಳಾರಿ ರೆಡ್ಡಿ ಜನ ಸಂಘ(ರಿ)ದ ಜಿಲ್ಲಾಧ್ಯಕ್ಷ ಎನ್.ಪ್ರತಾಪ್ ರೆಡ್ಡಿ, ಸಹಾಯಕ ಆಯುಕ್ತರ ಕಚೇರಿಯ ತಹಶೀಲ್ದಾರ ಶಾಷಾವಲಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ