ಮಂಗಳವಾರ, ಜನವರಿ 20, 2026
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಜ.20:(ಕರ್ನಾಟಕ ವಾರ್ತೆ):
ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಕ್ತಿಯಾರ್ ಎನ್ನುವ 38 ವರ್ಷದ ವ್ಯಕ್ತಿ 2024ರ ಡಿ.04 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ:
ಎತ್ತರ 5.8 ಅಡಿ, ಎಣ್ಣೆ ಗೆಂಪು ಮೈಬಣ್ಣ, ಕೋಲು ಮುಖ, ಎಡ ಕೆನ್ನೆಯ ಮೇಲೆ ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಉರ್ದು ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಸುಳಿವು ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ