ಮಂಗಳವಾರ, ಜನವರಿ 20, 2026
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಜ.20(ಕರ್ನಾಟಕ ವಾರ್ತೆ):
ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಮ್ಮನಹಳ್ಳಿ ಗ್ರಾಮದ ನಿವಾಸಿ ವೈ.ಜನಾರ್ಧನ ಎನ್ನುವ 23 ವರ್ಷದ ಯುವಕ 2025 ರ ಏಪ್ರಿಲ್ 09 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪನಿರೀಕ್ಷಕರು ಮನವಿ ಮಾಡಿದ್ದಾರೆ.
ಯುವಕ, ಜಿಂದಾಲ್ ನಲ್ಲಿ ಸೂಪರ್ ವೈಸರ್ ಕೆಲಸ ಹಾಗೂ ಊರಲ್ಲಿ ಬೇಸಾಯ ಮಾಡಿಕೊಂಡು ಇರುತ್ತಾನೆ. ಬಳ್ಳಾರಿಯಲ್ಲಿ ಉದ್ಯೋಗ ಮೇಳ ನಡೆಯುತ್ತಿದೆ, ಬಳ್ಳಾರಿಗೆ ಹೋಗಿ ಬರುತ್ತೇನೆಂದು ಹೇಳಿ ಹೋದವನು ರಾತ್ರಿಯಾದರೂ ಮನೆಗೆ ಬಂದಿರುವುದಿಲ್ಲ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಯುವಕನ ಚಹರೆ ಗುರುತು:
ಎತ್ತರ 5.9 ಅಡಿ, ಸಾಧಾರಣ ಮೈಕಟ್ಟು, ಕಪ್ಪು ಬಣ್ಣ, ಗಡ್ಡ ಬಿಟ್ಟಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಗಿಳಿ ಬಣ್ಣದ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ಕುಡತಿನಿ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ