ಮಂಗಳವಾರ, ಜನವರಿ 20, 2026
ಹೊಲಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜ.20(ಕರ್ನಾಟಕ ವಾರ್ತೆ):
ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2024-25 ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಆರ್.ಎ.ಪಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಗೆ ಹೊಲಿಗೆ ತರಬೇತಿಗಾಗಿ ಸಾಮಾನ್ಯಯೋಜನೆಯಡಿ 26 ಹಾಗೂ ವಿಶೇಷ ಘಟಕ ಯೋಜನೆಯಡಿ (ಪರಿಶಿಷ್ಟ ಜಾತಿ) 04 ಸೇರಿ ಒಟ್ಟು 30 ಫಲಾನುಭವಿಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ 30 ದಿನಗಳ ಶಿಷ್ಯವೇತನ ರಹಿತ ಉಚಿತ ವಸತಿ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆದ ನಂತರ ಉಚಿತ ವಿದ್ಯುತ್ ಚಾಲಿತ ಹೊಲಿಗೆಯಂತ್ರ ನೀಡಲಾಗುತ್ತದೆ.
ತರಬೇತಿ ಪಡೆಯಲು ಆಸಕ್ತಯುಳ್ಳ ಮಹಿಳಾ ಅಭ್ಯರ್ಥಿಗಳು ಉಪನಿರ್ದೇಶಕರು(ಗ್ರಾ.ಕೈ) ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್, ಹೊಸಪೇಟೆ ರಸ್ತೆ, ಬಳ್ಳಾರಿ, ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಜ.27 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.08392-242270 ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿಗಳ ಮೊ.9035547140 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕರು(ಗ್ರಾ.ಕೈ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ