ಮಂಗಳವಾರ, ಜನವರಿ 20, 2026

ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಗೆ ಹೊಲಿಗೆ ತರಬೇತಿ: ಅರ್ಜಿ ಆಹ್ವಾನ

ಬಳ್ಳಾರಿ,ಜ.20(ಕರ್ನಾಟಕ ವಾರ್ತೆ): ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ವಲಯದ ವಿಶೇಷ ಘಟಕ ಯೋಜನೆಯಡಿ 37 ಮತ್ತು ಗಿರಿಜನ ಉಪಯೋಜನೆಯಡಿ 12 ಸೇರಿ ಒಟ್ಟು 49 ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಗೆ ಹೊಲಿಗೆ ತರಬೇತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ತರಬೇತಿ, ಶಿಷ್ಯವೇತನ ರಹಿತ, ಒಂದು ತಿಂಗಳ ಉಚಿತ ವಸತಿಯೊಂದಿಗೆ ತರಬೇತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಿದ್ಯುತ್‌ಚಾಲಿತ ಹೊಲಿಗೆಯಂತ್ರ ವಿತರಿಸಲಾಗುವುದು. 2025-26ನೇ ಸಾಲಿನ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಬಳ್ಳಾರಿ ಜಿಲ್ಲೆಯ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತವಾಗಿ 233 ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ ವಿತರಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನ. ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ ವಿಳಾಸ www.ballari.nic.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳು (ಬಳ್ಳಾರಿ- ಮೊ.9035547140, ಸಂಡೂರು ಮೊ.9844200579) ಅಥವಾ ದೂ.08392-242270 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕರು(ಗ್ರಾ.ಕೈ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ