ಶುಕ್ರವಾರ, ಜನವರಿ 23, 2026

ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜ.23(ಕರ್ನಾಟಕ ವಾರ್ತೆ): ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅಂತರ ರಾಷ್ಟಿçÃಯ, ರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ (01.01.2024 ರಿಂದ 31.12.2024 ರ ವರೆಗೆ ನಡೆದ) ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜಿಲ್ಲೆಯಿಂದ ಅಂತರಾಷ್ಟಿçÃಯ, ರಾಷ್ಟಿçÃಯ ಮತ್ತು ರಾಜ್ಯಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಆನ್ ಲೈನ್ http://sevasindhu.karnataka.gov.in ಮೂಲಕ ಜ.31 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ