ಶುಕ್ರವಾರ, ಫೆಬ್ರವರಿ 27, 2026

ಕುರೇಕುಪ್ಪ: ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವತಿಯಿಂದ 2019-20ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಬಾಕಿ ಉಳಿದ ಮೊತ್ತಕ್ಕೆ ಅರ್ಹ ಫಲಾನುಭವಿಗಳಿಂದ ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಪುನಃ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.07 ಕೊನೆಯ ದಿನವಾಗಿದೆ. *ಬೇಕಾದ ದಾಖಲೆ:* ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಇತ್ತೀಚಿನ ಭಾವ ಚಿತ್ರ ಹಾಗೂ ಮನೆಗೆ ಸಂಬAಧಿಸಿದ ತೆರಿಗೆ ರಶೀದಿ, ನಮೂನೆ-03, ಜೆರಾಕ್ಸ್ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ವಿಎಸ್‌ಕೆ ವಿವಿ: ಪ್ರಸಾರಾಂಗದ ಪಠ್ಯಪುಸ್ತಕಗಳ ಲೋಕಾರ್ಪಣೆ | ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು

ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ): ಪಠ್ಯಪುಸ್ತಕಗಳು ವೈವಿಧ್ಯಮಯ ಜೀವನದ ಅನುಭವಗಳ ಜೊತೆಗೆ ವಿವಿಧ ಜ್ಞಾನಶಿಸ್ತುಗಳ ಕೈಪಿಡಿಗಳಾಗಿದ್ದು, ಶೈಕ್ಷಣಿಕ ವ್ಯವಸ್ಥೆಯ ಉದ್ದೇಶಗಳನ್ನು ಸಾಧಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅಭಿಪ್ರಾಯಪಟ್ಟರು. ನಗರದ ಬಳ್ಳಾರಿ ಬಿಜಿನೆಸ್ ಕಾಲೇಜು ಸಭಾಂಗಣದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ನಾತಕ ಪದವಿಯ ನಾಲ್ಕನೇ ಸೆಮಿಸ್ಟರ್‌ನ ಕಲಾ ಸೌರಭs-3, ವಾಣಿಜ್ಯ ಸೌರಭs-3, ವಿಜ್ಞಾನ ಸೌರಭ-3 ಕನ್ನಡ ಭಾಷಾ ಪಠ್ಯಪುಸ್ತಕಗಳ ಲೋಕಾರ್ಪಣೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕಗಳನ್ನು ಉತ್ತಮವಾಗಿ ರಚಿಸಿ ವಿದ್ಯಾರ್ಥಿಗಳಲ್ಲಿ ಔದ್ಯೋಗಿಕ ಭರವಸೆಯನ್ನು ಬೆಳೆಸುವ, ಆತ್ಮವಿಶ್ವಾಸವನ್ನು ತುಂಬುವ ಮಹತ್ವದ ಕಾರ್ಯವನ್ನು ಪ್ರಸಾರಾಂಗ ಮಾಡುತ್ತಿದೆ ಎಂದು ಹೇಳಿದರು. ಪಠ್ಯಪುಸ್ತಕಗಳು ಹೊಸ ಹೊಸ ಜ್ಞಾನ ವಿಚಾರಗಳನ್ನು ತಿಳಿಸುವ ಮಹತ್ವದ ಸಾಧನಗಳಾಗಿದ್ದು, ಈ ಮೂಲಕ ವಿದ್ಯಾರ್ಥಿಗಳ ದೈನಂದಿನ ಜೀವನದ ಭಾಗಗಳಾಗಿ ಕಾರ್ಯನಿರ್ವಹಿಸಲು ವಿಶ್ವವಿದ್ಯಾಲಯವು ಮಹತ್ವದ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ.ಸಿ.ಬಿ. ಚಿಲ್ಕರಾಗಿ ಅವರು ಮಾತನಾಡಿ, ವಿಶ್ವವಿದ್ಯಾಲಯವು ಪ್ರಕಟಿಸಿದ ಪಠ್ಯಪುಸ್ತಕಗಳು ಪ್ರಾಚೀನ ಮತ್ತು ಆಧುನಿಕ ಕವಿಗಳ ಸಂಗಮವಾಗಿದ್ದು, ವೈವಿಧ್ಯಮಯ ಜ್ಞಾನವನ್ನು ನೀಡುವ ಕಣಜಗಳಾಗಿವೆ, ಹೊಸ ಹೊಸ ಆಲೋಚನೆಗಳನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ರಾಮಚಂದ್ರ ಅವರು ಮಾತನಾಡಿ ಈ ವರ್ಷ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ಬಹುಬೇಗ ದೊರೆತಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡುವುದರ ಮೂಲಕ ಉತ್ತಮ ಅಂಕಗಳನ್ನು ಗಳಿಸಬೇಕು ಎಂದು ಕರೆ ನೀಡಿದರು. ಪ್ರಸಾರಾಂಗದ ನಿರ್ದೇಶಕ ಡಾ.ತಿಪ್ಪೇರುದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಸಾರಾಂಗವು ವಿಶ್ವವಿದ್ಯಾಲಯದ ಹೃದಯವಾಗಿದ್ದು, ವಿದ್ಯಾರ್ಥಿಗಳ, ಜನಸಾಮಾನ್ಯರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸಿ ಜ್ಞಾನ ಪ್ರಸರಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಲಾಸೌರಭ-3, ವಾಣಿಜ್ಯ ಸೌರಭ-3, ವಿಜ್ಞಾನ ಸೌರಭ-3 ಪಠ್ಯಪುಸ್ತಕಗಳನ್ನು ಸಂಪಾದಿಸಿದ ಡಾ.ಎ.ಎಂ.ರಾಜಶೇಖರಯ್ಯ, ಪ್ರೊ.ನಾಗಣ್ಣ ಕಿಲಾರಿ, ಡಾ.ಮಲ್ಲಿಕಾರ್ಜುನ ಎಂ. ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಕನ್ನಡ ಅಧ್ಯಾಪಕರಾದ ಸರ್ವಮಂಗಳ, ಮಂಜುಳ ಕಾರ್ಯಕ್ರಮವನ್ನು ನಿರೂಪಿಸಿದರು. ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜಿನ ಅಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ---------

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ): ನಗರದ ಕೇಂದ್ರ ಬಸ್ ನಿಲ್ದಾಣ (ಹೊಸ ಬಸ್ ನಿಲ್ದಾಣ) ದ ವಿದ್ಯುತ್ ಮತ್ತು ಸ್ಟೋರ್ ರೂಂ ಹಿಂಭಾಗ ಇರುವ ಕಟ್ಟೆಯ ಮೇಲೆ ಸುಮಾರು 50 ವರ್ಷದ ವ್ಯಕ್ತಿಯು ಆರೋಗ್ಯ ಸರಿಯಿಲ್ಲದೇ ಯಾವುದೋ ಒಂದು ಖಾಯಿಲೆಯಿಂದ ಬಳಲಿ ಮೃತಪಟ್ಟಂತೆ ಕಂಡುಬAದಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಚಹರೆ: ಎತ್ತರ ಅಂದಾಜು 5.6 ಅಡಿ, ಅರ್ಧ ಇಂಚು ಉದ್ದದ ಬಿಳಿ ಮಿಶ್ರಿತ ಕಪ್ಪು ಕೂದಲು ಹಾಗೂ ಗಡ್ಡ, ಮೀಸೆ ಹೊಂದಿರುತ್ತಾನೆ. ಮೃತನ ಎಡಗೈ ಮೇಲೆ ಹಾವಿನ ಅಚ್ಚೆ ಗುರುತು ಹಾಕಿಸಿಕೊಂಡಿರುತ್ತಾನೆ. ಮಾಸಿದ ಕಪ್ಪು ಬಣ್ಣದ ಆಫ್ ತೋಳಿನ ಟೀ ಶರ್ಟ್, ತಿಳಿ ನೀಲಿ ಬಣ್ಣದ ಲುಂಗಿ, ಕಂದು ಬಣ್ಣದ ಒಳ ಉಡುಪು ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ------------

ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ | ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ

ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ): ದೈಹಿಕ ಅಂಗವೈಕಲ್ಯಕ್ಕಿAತ ಮಾನಸಿಕ ವೈಕಲ್ಯತೆ ದೊಡ್ಡದು. ವಿಶೇಷ ಚೇತನರನ್ನು ಕೀಳರಿಮೆಯಿಂದ ನೋಡದೆ, ಅವರಲ್ಲಿರುವ ವಿಶೇಷ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಹೇಳಿದರು. ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್)ಅಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಳ್ಳಾರಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇವರು ಒಂದು ಅಂಗವನ್ನು ವಿಕಲತೆ ಮಾಡಿದಾಗ ಮತ್ತೊಂದು ವಿಶೇಷ ಸಾಮರ್ಥ್ಯವನ್ನು ನೀಡಿರುತ್ತಾನೆ, ಅದನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಪೋಷಕರು ಮತ್ತು ಕುಟುಂಬದ ಸದಸ್ಯರು ವಿಶೇಷಚೇತನರನ್ನು ಮೂಲೆ ಗುಂಪು ಮಾಡದೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಸರ್ಕಾರವು ಇವರ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತಿದೆ ಎಂದರು. ಜಿಲ್ಲೆಯ ವಿವಿಧ ಕೈಗಾರಿಕೆಗಳ ಮಾಲೀಕರು ಮತ್ತು ಸಿಬ್ಬಂದಿ ವರ್ಗ ತಮ್ಮ ಸಾಮಾಜಿಕ ಹೊಣೆಗಾರಿಕೆಯ ಅಡಿ ಇಂತಹ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮವು ಕೇವಲ ಸಹಾಯಧನ ವಿತರಣೆಗೆ ಸೀಮಿತವಾಗದೆ, ವಿಶೇಷ ಚೇತನರ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಸಮಾಜದ ಜವಾಬ್ದಾರಿಯನ್ನು ನೆನಪಿಸುವ ಕಾರ್ಯಕ್ರಮವಾಗಿದೆ ಎಂದರು. ಜಿಲ್ಲೆಯಲ್ಲಿ ದೃಷ್ಟಿಹೀನರಿಗಾಗಿ ಬ್ರೆöÊಲ್ ಲಿಪಿ ಕಲಿಸುವ ಶಿಬಿರಗಳನ್ನು ಆಯೋಜಿಸುವ ಅಗತ್ಯವಿದೆ. ಶ್ರವಣ ದೋಷವುಳ್ಳವರಿಗೆ ಅಗತ್ಯ ಉಪಕರಣಗಳನ್ನು ಒದಗಿಸುವ ಕಾರ್ಯಗಳು ನಿರಂತರವಾಗಿ ನಡೆಯಬೇಕು. ಮಕ್ಕಳಿಗೆ ಆರಂಭಿಕ ಹಂತದಲ್ಲೇ ಬ್ರೆöÊಲ್ ಲಿಪಿಯ ತರಬೇತಿ ನೀಡುವುದರಿಂದ ಅವರ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರ ಭವಿಷ್ಯ ಉಜ್ವಲವಾಗಲಿದೆ. ಜಿಲ್ಲೆಯನ್ನು ಹಸಿರುಕರಣ ಮಾಡುವಲ್ಲಿ ಹೆಚ್ಚು ಹೆಚ್ಚು ಗಿಡ ನೆಡಬೇಕಾಗಿದೆ. ತ್ರಿಚಕ್ರ ವಾಹನ ಬಳಸುವರು ರಸ್ತೆ ಸಂಚಾರ ನಿಯಮ ಪಾಲಿಸುವ ಮೂಲಕ ನಿಧಾನವಾಗಿ ಸಂಚರಿಸಬೇಕು ಎಂದು ಆಶಿಸಿದರು. ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿನ ವಿಶೇಷ ಚೇತನರು ಸರ್ಕಾರದಿಂದಿರುವ ಸೌಲಭ್ಯಗಳು ವಂಚಿತರಾಗಿದ್ದಲ್ಲಿ ಕಚೇರಿಗೆ ಭೇಟಿ ನೀಡಿದರೆ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ವಿಕಲಚೇತನರಿಗೆ ಸೌಲಭ್ಯಗಳನ್ನು ನೀಡುವಾಗ ಅಧಿಕಾರಿಗಳು ವಿಶೇಷ ಆದ್ಯತೆ ನೀಡಬೇಕು. ಧನಾತ್ಮಕ ಕಾಳಜಿಯ ಮೂಲಕ ಅವರಿಗೆ ಹೆಚ್ಚಿನ ಸೌಲತ್ತುಗಳನ್ನು ನೀಡಿದಾಗ ಮಾತ್ರ ಅವರು ಸಮಾಜದಲ್ಲಿ ಸಮಾನವಾಗಿ ಬದುಕಲು ಸಾಧ್ಯ ಎಂದು ಹೇಳಿದರು. ಕೈಗಾರಿಕಾ ಸಂಸ್ಥೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯನ್ನು ವಿಕಲಚೇತನರ ಸಬಲೀಕರಣಕ್ಕಾಗಿ ಮತ್ತು ಅವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೆಚ್ಚು ಬಳಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಆತ್ಮವಿಶ್ವಾಸದ ಕೊರತೆಯೇ ಅತಿದೊಡ್ಡ ವಿಕಲಚೇತನವಾಗಿದೆ. ಆತ್ಮವಿಶ್ವಾಸವಿದ್ದರೆ ಎಂತಹ ಅಡೆತಡೆಗಳನ್ನೂ ಮೀರಿ ಗುರಿ ತಲುಪಬಹುದು. ವಿಕಲಚೇತನರಿಗೆ ಸಮಾಜದಲ್ಲಿ ಸಮಾನ ಅವಕಾಶ ಮತ್ತು ಸ್ವಾಭಿಮಾನದಿಂದ ಬದುಕಲು ಇಂತಹ ಸೌಲಭ್ಯಗಳು ದೊಡ್ಡ ಆಸರೆಯಾಗಲಿವೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿ ಯೋಜನೆಯಡಿ ಸುಮಾರು 53 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಗುರಿ ಹೊಂದಲಾಗಿದ್ದು, ಸಾಂಕೇತಿಕವಾಗಿ ಕೆಲವರಿಗೆ ಪ್ರಮಾಣಪತ್ರ ಹಾಗೂ ವಾಹನಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ. ಆರ್., ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರು, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ವಿಶೇಷ ಚೇತನರು, ಅವರ ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. -------------

ಬಳ್ಳಾರಿ: ಸಂಚಾರ ಜನ ಸಂಪರ್ಕ ಸಭೆಯಲ್ಲಿ ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ಹೇಳಿಕೆ | ಟ್ರಾಫಿಕ್ ಸಮಸ್ಯೆಗೆ ಹಂತ-ಹAತವಾಗಿ ಪರಿಹಾರ ಕ್ರಮ

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಸಂಬAಧಿಸಿದAತೆ ಹಂತ- ಹಂತವಾಗಿ ಪರಿಹಾರ ಮಾರ್ಗ ಕಂಡುಕೊAಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಹೇಳಿದರು. ಜಿಲ್ಲಾ ಪೊಲೀಸ್ ಇಲಾಖೆ, ಸಂಚಾರ ಪೊಲೀಸ್ ಠಾಣೆ ವತಿಯಿಂದ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ, ಇದರಿಂದಾಗಿ ಸಾರ್ವಜನಿಕರಿಗೆ ಆಗುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಲು ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಚಾರ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎಲ್ಲಾ ಇಲಾಖೆಗಳ ಅಗತ್ಯ ಸಹಕಾರದೊಂದಿಗೆ ಆಟೋ, ಲಾರಿ, ಕಿರಾಣಿ ಅಂಗಡಿ- ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳ ಕೈಜೋಡಿಸುವಿಕೆಯ ಅಭಿಮತ ಬೇಕಿದೆ ಎಂದರು. ನಗರದಲ್ಲಿ ಟ್ರಾಫಿಕ್ ಕುರಿತಂತೆ ಸಮಸ್ಯೆಗಳನ್ನು ಆಲಿಸಲು ಈ ಸಭೆಯು ಅತ್ಯಂತ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಸಮಸ್ಯೆಗಳನ್ನು ಅರಿತು ಹಂತ- ಹಂತವಾಗಿ ಪರಿಹಾರ ಮಾರ್ಗ ಕಂಡುಕೊAಡು ಸೂಕ್ತ ಕ್ರಿಯಾಯೋಜನೆ ರೂಪಿಸಿ ಸಾರ್ವಜನಿಕ ಓಡಾಟಕ್ಕೆ ಯಾವುದೇ ರೀತಿಯ ತೊಂದರೆಯಾಗದAತೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು. ವಾಹನ ಸವಾರರು ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿಕೊಂಡು ನಿಧಾನಗತಿಯಲ್ಲಿ ಚಲಾಯಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ಹೇಳಿದ ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ಅವರು, ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಪ್ರೇರಿತರಾಗಿ ಟ್ರಾಫಿಕ್ ವಾರ್ಡನ್ ಆಗಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತ, ಬಡಾವಣೆಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯವಿದೆ ಎಂದರು. ನಗರದಲ್ಲಿ ಆಟೋ ಚಾಲಕರು ನಿಧಾನಗತಿಯಲ್ಲಿ ವಾಹನ ಚಲಾಯಿಸಬೇಕು. ತತ್ ಕ್ಷಣ ಬ್ರೇಕ್ ಹಾಕುವುದು, ಹಿಂಬದಿ ಸವಾರರಿಗೆ ತೊಂದರೆ ಉಂಟುಮಾಡುವುದು ಮಾಡಬಾರದು. ಹಾಗಾಗಿ ನಿಧಾನಗತಿಯಲ್ಲಿ ವಾಹನ ಚಲಾವಣೆ ಮಾಡಬೇಕು ಎಂದರು. ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಮಾರ್ಗ ಕಂಡುಕೊಳ್ಳಲು ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆಯೊಂದಿಗೆ ಮಹಾನಗರ ಪಾಲಿಕೆಯು ಒಳಗೊಂಡ ಚರ್ಚಿಸಿ ಪೂರಕ ಕ್ರಮ ವಹಿಸಲಾಗುವುದು ಎಂದರು. *ಸಾರ್ವಜನಿಕರಿAದ ಅಹವಾಲು:* ನಗರದಲ್ಲಿ ಅವಶ್ಯಕತೆ ಇರುವಲ್ಲಿ ಸೂಕ್ತ ಸ್ಥಳ ಗುರುತಿಸಿ, ಆಟೋ ಸ್ಟಾö್ಯಂಡ್ ವ್ಯವಸ್ಥೆ ಕಲ್ಪಿಸಬೇಕು. ನಗರದ ವಿವಿಧೆಡೆ ಸಂಚಾರ ದಟ್ಟಣೆ ಇರುವಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸಬೇಕು. ಸಂಜೆ ವೇಳೆಯಾದರೆ ನಗರದ ಹೊರಭಾಗದ ಲೇ ಔಟ್ ಗಳಲ್ಲಿ ಮದ್ಯ ಸೇವನೆ, ರಾತ್ರಿಯಾದರೆ ಕಳ್ಳತನ ಪ್ರಕರಣ ಹೆಚ್ಚುತ್ತಿವೆ. ಹಾಗಾಗಿ ಲೇ ಔಟ್ ಮಾಲೀಕರಿಗೆ ಸಿಸಿಟಿವಿ, ಭದ್ರತಾ ಸಿಬ್ಬಂದಿ ನಿಯೋಜಿಸುವಂತೆ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು. ನಗರದಲ್ಲಿ ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರೊಬ್ಬರು ಸಭೆಗೆ ತಿಳಿಸಿದರು. ಇನ್ನೋರ್ವ ಸಾರ್ವಜನಿಕರೊಬ್ಬರು ಮಾತನಾಡಿ, ನಗರದ ಬೆಂಗಳೂರು ರಸ್ತೆಯಲ್ಲಿ ಪಾದಚಾರಿ ಮಾರ್ಗ ಬೀದಿ ಬದಿ ವ್ಯಾಪಾರಿಗಳಿಂದ ಅತಿಕ್ರಮೇಣಗೊಂಡಿದ್ದು, ಸಾರ್ವಜನಿಕರು ಓಡಾಡಲು ಬಹಳ ತೊಂದರೆಯಾಗುತ್ತಿದೆ. ಹಣ್ಣು ವ್ಯಾಪಾರಿಗಳು ತಳ್ಳುವ ಬಂಡಿಗಳಿAದ ಧ್ವನಿ ವರ್ಧಕಗಳ ಮೂಲಕ ಅತಿಯಾಗಿ ಶಬ್ದ ಮಾಡಿಕೊಂಡು ಓಡಾಡುತ್ತಿದ್ದು, ಇದು ಸಹ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸರ್ಕಾರಿ ಬಸ್ ಗಳೇ ರಸ್ತೆಗಳ ಮಧ್ಯದಲ್ಲಿಯೇ ಎಲ್ಲಿ ಅಂದರಲ್ಲಿ ನಿಲುಗಡೆ ಮಾಡುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇವೆಲ್ಲವುಗಳಿಗೂ ಸೂಕ್ತ ಪರಿಹಾರ ಮಾರ್ಗ ಕಲ್ಪಿಸಬೇಕು ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು. ನಗರದಲ್ಲಿ ಸುಮಾರು 20 ಕ್ಕೂ ಹೆಚ್ಚು ಜನ ಮಹಿಳೆಯರು ಪರವಾನಿಗೆ ಪಡೆದು ಹಣ್ಣು- ತರಕಾರಿ ವ್ಯಾಪಾರ ಮಾಡುತ್ತಿದ್ದೇವೆ. ಆದರೆ ಮಾರಾಟ ಮಾಡಲು ಸೂಕ್ತ ಸ್ಥಳವಿಲ್ಲ, ನಮಗೆ ವ್ಯಾಪಾರಕ್ಕಾಗಿ ಸೂಕ್ತ ಸ್ಥಳ ವ್ಯವಸ್ಥೆ ಮಾಡಿಕೊಡಬೇಕು ಎಂದು ಮಹಿಳಾ ವ್ಯಾಪಾರಿಯೊಬ್ಬರು ಅಧಿಕಾರಿಗಳ ಗಮನಕ್ಕೆ ತಂದರು. ನಗರದಲ್ಲಿ ವಿವಿಧ ಬಡಾವಣೆಗಳ ಮುಖ್ಯರಸ್ತೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇವುಗಳಿಗೆ ವೇಗ ನೀಡಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರೊಬ್ಬರು ಸಭೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪಿ.ರವಿಕುಮಾರ್. ನವೀನ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಬಸರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ರುದ್ರಪ್ಪ ಸೇರಿದಂತೆ ಕೆಕೆಆರ್‌ಟಿಸಿ, ಕೆಇಬಿ ಅಧಿಕಾರಿಗಳು, ಬಳ್ಳಾರಿ ಚೇಂಬರ್ಸ್ ಆಫ್ ಕಾಮರ್ಸ್ ನ ಅಧ್ಯಕ್ಷರು, ಕಿರಾಣಿ ಅಂಗಡಿ ವ್ಯಾಪಾರಸ್ಥರು, ಖಾಸಗಿ ಬಸ್ ಮಾಲೀಕರು- ಚಾಲಕರು, ಲಾರಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಆಟೋ ಯೂನಿಯನ್ ಅಧ್ಯಕ್ಷರು ಹಾಗೂ ಮಾಲೀಕ- ಚಾಲಕರು, ಟ್ಯಾಕ್ಸಿ ಸಂಘದ ಅಧ್ಯಕ್ಷರು ಹಾಗೂ ಮಾಲಿಕ- ಚಾಲಕರು, ಬೀದಿ ಬದಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ----------

ಗುರುವಾರ, ಫೆಬ್ರವರಿ 26, 2026

ಬಳ್ಳಾರಿ ಪೊಲೀಸ್ ರನ್: ಮಾ.01 ರಂದು ಮ್ಯಾರಥಾನ್ ಮತ್ತು ವಾಕಥಾನ್

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜೆಎಸ್‌ಡಬ್ಲೂö್ಯ, ಬಿಎಂಎA ಸಹಯೋಗದಲ್ಲಿ ಸಾರ್ವಜನಿಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾ.01 ರಂದು ಬೆಳಿಗ್ಗೆ 07 ಗಂಟೆಗೆ ನಗರದ ಡಿ.ಎ.ಆರ್ ಪೊಲೀಸ್ ಮೈದಾನದಲ್ಲಿ “ಬಳ್ಳಾರಿ ಪೊಲೀಸ್ ರನ್” (ಮ್ಯಾರಥಾನ್ ಮತ್ತು ವಾಕಥಾನ್) ಆಯೋಜಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ, ರಸ್ತೆ ಸುರಕ್ಷತೆ, ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ ಹಾಗೂ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ 'Run for Awareness, Run for Strength, Run for Ballari' ಎಂಬ ಘೋಷವಾಕ್ಯದಡಿ ಈ ಓಟ ಹಮ್ಮಿಕೊಳ್ಳಲಾಗಿದೆ. *ಓಟದ ವಿಭಾಗ ಮತ್ತು ಮಾರ್ಗ:* 2ಕೆ ವಾಕಥಾನ್ (ಹಿರಿಯ ನಾಗರಿಕರಿಗಾಗಿ): ಡಿ.ಎ.ಆರ್ ಮೈದಾನ- ಸಂಗಮ್ ವೃತ್ತ- ಗಡಿಗಿ ಚೆನ್ನಪ್ಪ ವೃತ್ತ- ಹಳೆ ಕೋರ್ಟ್ ರಸ್ತೆ- ಡಿ.ಎ.ಆರ್ ಮೈದಾನ. 5ಕೆ ಮ್ಯಾರಥಾನ್: ಡಿ.ಎ.ಆರ್ ಮೈದಾನ- ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಹೆಚ್.ಆರ್. ಗವಿಯಪ್ಪ ವೃತ್ತ- ರೈಲ್ವೆ ಸ್ಟೇಷನ್ ರಸ್ತೆ ಮೂಲಕ ಮರಳಿ ಡಿಎಆರ್ ಪೊಲೀಸ್ ಮೈದಾನಕ್ಕೆ ಅಂತ್ಯಗೊಳ್ಳಲಿದೆ. 10ಕೆ ಮ್ಯಾರಥಾನ್: ಡಿ.ಎ.ಆರ್ ಮೈದಾನದಿಂದ ಪ್ರಾರಂಭವಾಗಿ ಸಂಗಮ್ ವೃತ್ತ- ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗ- ಹೆಚ್.ಆರ್. ಗವಿಯಪ್ಪ ವೃತ್ತ- ಡಾ.ಬಿ.ಆರ್.ಅಂಬೇಡ್ಕರ್ ವೃತ್ತ- ವಾಲ್ಮೀಕಿ ವೃತ್ತ(ಎಸ್‌ಪಿ ವೃತ್ತ)- ಕನಕ ದುರ್ಗಮ್ಮ ದೇವಸ್ಥಾನ- ಮೋಕಾ ರಸ್ತೆ- ಭಾರತೀಯ ಮಿಲ್ಕ್ ಡೈರಿ ಮೂಲಕ ಮರಳಿ ಬಸವೇಶ್ವರ ನಗರ ಮುಖ್ಯ ರಸ್ತೆ- ಎಸ್.ಎನ್ ಪೇಟೆ ಫ್ಲೆöÊ ಓವರ್ ಮೂಲಕ ಸಾಗಿ ಮರಳಿ ಡಿಎಆರ್ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ. ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳನ್ನು ವಿತರಿಸಲಾಗುವುದು. *ನಗದು ಬಹುಮಾನ ವಿವರ:* 5ಕೆ ಮ್ಯಾರಾಥಾನ್: ಪ್ರಥಮ-10,000, ದ್ವಿತೀಯ- 7,000 ಮತ್ತು ತೃತೀಯ- 4,000. 10ಕೆ ಮ್ಯಾರಾಥಾನ್: ಪ್ರಥಮ-15,000, ದ್ವಿತೀಯ- 10,000 ಮತ್ತು ತೃತೀಯ- 7,000. ಇದರ ಜೊತೆಗೆ, ಓಟದ ನಂತರ ಡಿ.ಎ.ಆರ್ ಮೈದಾನದಲ್ಲಿ ಕ್ವಿಜ್ ಸ್ಪರ್ಧೆ ಏರ್ಪಡಿಸಲಾಗಿದ್ದು, ಸರಿಯಾದ ಉತ್ತರ ನೀಡಿದವರಿಗೆ ಹೆಲ್ಮೆಟ್ ಬಹುಮಾನವಾಗಿ ನೀಡಲಾಗುವುದು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಮತ್ತು ಖಾಸಗಿ ನೌಕರರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಿಳಿಸಿದ್ದಾರೆ. ಮ್ಯಾರಾಥಾನ್ ಓಟಕ್ಕಾಗಿ ಸಿದ್ಧಪಡಿಸಲಾದ ವಿಶೇಷ ಟಿ-ಶರ್ಟ್ಗಳನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು. -------------

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ ಅಥವಾ ಮೇಕೆ (10+1) ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಧನ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿರುವವರು, 18 ರಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯರಿಗೆ ಶೇ.33.3 ಮತ್ತು ವಿಶೇಷಚೇತನರಿಗೆ ಶೇ.3 ರಷ್ಟು ಮೀಸಲಾತಿ ಕಲ್ಪಿಸಲಾಗಿದ್ದು, ಬಳ್ಳಾರಿ ಜಿಲ್ಲೆಯ ತಾಲ್ಲೂಕು ಮತ್ತು ವಿಧಾನಸಭಾ ಕ್ಷೇತ್ರವಾರು ವಿಂಗಡಿಸಿ ಗುರಿ ನಿಗಧಿಪಡಿಸಿ ಅನುಷ್ಠಾನಗೊಳಿಸಲಾಗುವುದು. ಅರ್ಜಿ ಸಲ್ಲಿಸಬಯಸುವವರು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 7 ರೊಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಮೀಪದ ಪಶು ವೈದ್ಯ ಸೇವಾ ಸಂಸ್ಥೆಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಫೆ.27 ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.27 ರಂದು ಬೆಳಿಗ್ಗೆ 08.30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಆವರಣದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್)ಅಡಿ ಬಳ್ಳಾರಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಘನ ಉಪಸ್ಥಿತಿ ಇರುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಭಾಗವಹಿಸುವರು. ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಜಹೀರಾ ನಾಸೀಮ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ ತ್ರಿಲೋಕಚಂದ್ರ, ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಹೆಚ್.ಎನ್ ಗೋಪಾಲಕೃಷ್ಣ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಕಲಬುರಗಿಯ ಕಲಬುರಗಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಎ.ಶಿಂಧಿಹಟ್ಟಿ, ಹುಬ್ಬಳ್ಳಿಯ ಹುಬ್ಬಳ್ಳಿ ವಲಯ ಕಾರ್ಖಾನೆಗಳ ಜಂಟಿ ನಿರ್ದೇಶಕ ರವೀಂದ್ರನಾಥ್ ಎನ್.ರಾಠೋಡ್, ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ. ಆರ್., ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ., ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ವಿಶೇಷ ಚೇತನರು ಹಾಗೂ ಅವರ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ----------

ಶ್ವೇತನಾಗ ವೇಣುಗೋಪಾಲ ಅವರಿಗೆ ಪಿಎಚ್‌ಡಿ ಪದವಿ

ಶ್ವೇತನಾಗ ವೇಣುಗೋಪಾಲ ಅವರಿಗೆ ಪಿಎಚ್‌ಡಿ ಪದವಿ ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಮಹಿಳಾ ಅಧ್ಯಯನ ವಿಭಾಗದ ಪಿಎಚ್.ಡಿ ವಿದ್ಯಾರ್ಥಿನಿ ಶ್ವೇತನಾಗ ವೇಣುಗೋಪಾಲ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ಮಾಗದರ್ಶಕ ಡಾ.ಕೆ.ವೆಂಕಟೇಶ್ ಹಾಗೂ ಸಹ ಮಾರ್ಗದರ್ಶಕ ಡಾ.ಶಿವಾನಂದ ಎಸ್.ವಿರಕ್ತಮಠ ಅವರ ಮಾರ್ಗದರ್ಶನದಲ್ಲಿ ‘ಸುರಪುರ ಸಂಸ್ಥಾನದ ರಾಜರ ಆಳ್ವಿಕೆಯಲ್ಲಿ ಮಹಿಳೆಯರು’ ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕಾಗಿ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

ಪಿಎಂ-ಕಿಸಾನ್ ಪ್ರೋತ್ಸಾಹಧನ: ರೈತರು ಕೇಂದ್ರ ನೋಂದಾಯಿತ ರೈತರ ಸಂಖ್ಯೆ ಸೃಜಿಸಿಕೊಳ್ಳಲು ಸೂಚನೆ

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ಜಿಲ್ಲೆಯ ರೈತರು ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ರೈತರು ತಮ್ಮ ಫ್ರೂಟ್ಸ್ ಐಡಿ ಗೆ ಇ-ಕೆವೈಸಿ, ಮೊಬೈಲ್ ಸಂಖ್ಯೆ, ತಮ್ಮ ಹೆಸರಿನಲ್ಲಿರುವ ಎಲ್ಲಾ ಭೂಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ ಎಫ್‌ಐಡಿಯಲ್ಲಿ ಸೇರ್ಪಡಿಸಿಕೊಳ್ಳುವ ಮೂಲಕ ಕೇಂದ್ರ ನೋಂದಾಯಿತ ರೈತರ ಸಂಖ್ಯೆ ಸೃಜನೆ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ಫ್ರೂಟ್ಸ್ ಹಾಗೂ ಭೂಮಿ ದತ್ತಾಂಶಗಳನ್ನು ನಿಯತವಾಗಿ ಜೋಡಣೆ ಮಾಡುವುದು ಅತಿ ಮುಖ್ಯವಾಗಿದೆ. ಹಾಗಾಗಿ ರೈತರು ಫ್ರೂಟ್ಸ್ ತಂತ್ರಾAಶದಲ್ಲಿ ಇ-ಕೆವೈಸಿ, ಮೊಬೈಲ್ ನಂಬರ್‌ಗಳನ್ನು ಅಪ್ಡೇಟ್ ಮಾಡಿಕೊಳ್ಳುವುದು, ರೈತರ ಹೆಸರಿನಲ್ಲಿರುವ ಎಲ್ಲಾ ಭೂಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ ಎಫ್.ಐ.ಡಿಯಲ್ಲಿ ಸೇರ್ಪಡಿಸಿಕೊಳ್ಳುವುದು ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ ನೀಡುವುದು ಕಡ್ಡಾಯವಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (ಸೆಂಟ್ರಲ್ ಫಾರ್ಮರ್ ಐಡಿ) ಸೃಜಿಸಲಾಗುತ್ತದೆ. ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿಎಂ-ಕಿಸಾನ್ ಯೋಜನೆ ಸೇರಿದಂತೆ ಇತರೆ ಯೋಜನೆಗಳಾದ ಬರ ಪರಿಹಾರ, ಬೆಳೆ ವಿಮೆ, ಮುಂತಾದ ಯೋಜನೆಗಳಿಗೆ ಕೇಂದ್ರ ನೊಂದಾಯಿತ ರೈತರ ಸಂಖ್ಯೆಯನ್ನು ಕಡ್ಡಾಯವಾಗಿ ಉಪಯೋಗಿಸಲಾಗುತ್ತದೆ. ಹಾಗಾಗಿ ರೈತರು ಕೇಂದ್ರ ಅಥವಾ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲಾಗುವ ಯೋಜನೆಯ ಸೌಲಭ್ಯವನ್ನು ಪಡೆಯಲು ರೈತರು ತಮ್ಮ ಆಧಾರ್ ಕಾರ್ಡ, ಆಧಾರ್ ಕಾರ್ಡ್ನೊಂದಿಗೆ ಜೋಡಣೆಯಾಗಿರುವ ಮೊಬೈಲ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ರೈತರ ಹೆಸರಿನಲ್ಲಿರುವ ಎಲ್ಲಾ ಪಹಣಿಗಳನ್ನು ತೆಗೆದುಕೊಂಡು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಹಾಗೂ ತೋಟಗಾರಿಕೆ ಇಲಾಖಾ ಕಚೇರಿಗಳಿಗೆ ಭೇಟಿ ನೀಡಿ ಕೇಂದ್ರ ನೋಂದಾಯಿತ ರೈತರ ಸಂಖ್ಯೆ ಸೃಜಿಸಿಕೊಳ್ಳಬೇಕು. ತಪ್ಪಿದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಮಾ.14 ರಂದು ರಾಷ್ಟಿçÃಯ ಲೋಕ್ ಅದಾಲತ್

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾರ್ಚ್ 14 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಸಲಾಗುವುದು. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದು. ರಾಷ್ಟಿçÃಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ. ಪೂರ್ವಭಾವಿ ಬೈಠಕ್ ಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. ---------------

ಬುಧವಾರ, ಫೆಬ್ರವರಿ 25, 2026

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮದ ಹೊಸ ಬೈಪಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಂದಾಜು 65-70 ವರ್ಷದ ಅನಾಮಧೇಯ ವ್ಯಕ್ತಿಗೆ ಹಿಂದಿನಿAದ ಯಾವುದೋ ಒಂದು ವಾಹನದ ಚಾಲಕನ ಅತಿವೇಗದಿಂದ ಡಿಕ್ಕಿ ಹೊಡೆದ ಪರಿಣಾಮ ಫೆ.24 ರಂದು ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪ್ರಕರಣ ದಾಖಲಾಗಿರುತ್ತದೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಸಾರ್ವಜನಿಕರು ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಚಹರೆ: ಎತ್ತರ 5.6 ಅಡಿ, ಕೋಲು ಮುಖ, ಕಪ್ಪು ಮೈಬಣ್ಣ, ತೆಳ್ಳನೆಯ ಮೈ ಕಟ್ಟು ಹೊಂದಿದ್ದು, ತಲೆಯಲ್ಲಿ 2 ರಿಂದ 3 ಇಂಚು ಉದ್ದದ ಬಿಳಿ ಮಿಶ್ರಿತ ಕೂದಲು, ಕುರುಚಲು ಗಡ್ಡ ಹೊಂದಿರುತ್ತಾನೆ. ತಿಳಿ ನೀಲಿ ಬಣ್ಣದ ತುಂಬು ತೋಳಿನ ಅಂಗಿ, ಹಸಿರು ಬಣ್ಣದ ಒಳ ಉಡುಪು, ನೀಲಿ ಬಣ್ಣದ ಚೆಕ್ಸ್ ಲುಂಗಿ ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿಐ ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. --------------

ಮಾ.03 ರಂದು ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.03 ರಂದು ಮಧ್ಯಾಹ್ನ 12 ಗಂಟೆಗೆ ನಗರದ ವಡ್ಡರ ಬಂಡ ಬಲಿಜ ಭವನದಲ್ಲಿ ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯನವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಕೆ.ರಮೇಶ್ ಬುಜ್ಜಿ ಸೇರಿದಂತೆ ಇತರರು ಭಾಗವಹಿಸುವರು. ನಿವೃತ್ತ ಶಿಕ್ಷಕ ಕೆ.ಬಿ.ಸಿದ್ದಲಿಂಗಪ್ಪ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಅನುಕೃಪ ರೌಡರು ತಂಡದಿAದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ. *ಮೆರವಣಿಗೆ:* ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10.30 ಗಂಟೆಗೆ ಬಲಿಜ ಭವನದಿಂದ ರಾಘವೇಂದ್ರ ಚಿತ್ರಮಂದಿರ- ಇಂದಿರಾ ವೃತ್ತ- ಗಡಿಗಿ ಚೆನ್ನಪ್ಪ ವೃತ್ತ- ಮೀನಾಕ್ಷಿ ವೃತ್ತ- ಮರಳಿ ಬಲಿಜ ಭವನದ ವರೆಗೆ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ. ---------------

ಮಾ.01 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.01 ರಂದು ಸಂಜೆ 06.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸಮಾಜದ ಹಿರಿಯ ಮುಖಂಡ ಪಲ್ಲೇದ ಪಂಪಾಪತಿ ಸೇರಿದಂತೆ ಇತರರು ಭಾಗವಹಿಸುವರು. ಪಾಲ್ತೂರಿನ ಚೆನ್ನವೀರ ಶಿವಾಚಾರ್ಯ ಮಹಾಸ್ವಾಮಿ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಹಿಂದೂಸ್ಥಾನಿ ಗಾಯಕ ವಿ.ಎಂ ವೀರಭದ್ರಯ್ಯ ತಂಡದಿAದ ವಚನ ಸಂಗೀತ ಕಾರ್ಯಕ್ರಮ ಇರಲಿದೆ. *ಮೆರವಣಿಗೆ:* ಜಯಂತಿ ಅಂಗವಾಗಿ ಅಂದು ಸಂಜೆ 04.30 ಗಂಟೆಗೆ ಮುನ್ಸಿಪಲ್ ಕಾಲೇಜು ಮೈದಾನದಿಂದ ಗಡಿಗಿ ಚೆನ್ನಪ್ಪ ವೃತ್ತ- ರೈಲ್ವೇ ನಿಲ್ದಾಣ ರಸ್ತೆ- ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ- ಹೆಚ್.ಆರ್ ಗವಿಯಪ್ಪ ವೃತ್ತ- ಡಾ.ಜೋಳದರಾಶಿ ದೊಡ್ಡನ ಗೌಡ ರಂಗಮAದಿರದ ವರೆಗೆ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ. ---------------

ಅತಿಥಿ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಎಲೆಕ್ಟಿçಕಲ್ ವಿಭಾಗದಲ್ಲಿ ಅತಿಥಿ ಬೋಧಕ ಹುದ್ದೆಗೆ ಅರ್ಹರಿಂದ ಆಹ್ವಾನಿಸಲಾಗಿದೆ. ಇಇಇ ವಿಭಾಗದಲ್ಲಿ ಬಿಇ (ಬಿ.ಟೆಕ್) ಪದವಿ ಪೂರ್ಣಗೊಳಿಸಿದ ಪದವೀಧರರಾಗಿರಬೇಕು. 3 ರಿಂದ 5 ವರ್ಷಗಳ ಅನುಭವವಿರಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ ಮೆಂಟ್ ನ ಐಶ್ವರ್ಯ ಕಾಲೋನಿಯ ಐಟಿಐ ಕ್ಯಾಂಪಸ್ ನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಮುತ್ತಣ್ಣ ಧರ್ಮಂತಿ ಅಥವಾ ದೂ.08392-200087, ಮೊ.9620057086 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಫೆ.26 ರಂದು ಸಂಚಾರ ಸಮಸ್ಯೆ ಕುರಿತ ಸಭೆ

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಬಳ್ಳಾರಿ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ, ಇದರಿಂದಾಗಿ ಸಾರ್ವಜನಿಕರಿಗೆ ಆಗುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಲು ಫೆ.26 ರಂದು ಸಂಜೆ 04 ಗಂಟೆಗೆ ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಸಂಚಾರ ಸಮಸ್ಯೆ ಕುರಿತ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರ ನೇತೃತ್ವದಲ್ಲಿ ಮಹಾನಗರ ಪಾಲಿಕೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಮತ್ತು ಕೆಕೆಆರ್‌ಟಿಸಿ ಸಹಯೋಗದಲ್ಲಿ ನಡೆಯಲಿದೆ. ಸಭೆಗೆ ಛೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರು ಹಾಗೂ ಸದಸ್ಯರು, ಕಿರಾಣಿ ಅಂಗಡಿ ವ್ಯಾಪಾರಸ್ಥರು, ಖಾಸಗಿ ಬಸ್ ಮಾಲೀಕರು- ಚಾಲಕರು, ಲಾರಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಆಟೋ ಯೂನಿಯನ್ ಅಧ್ಯಕ್ಷರು ಹಾಗೂ ಮಾಲೀಕ- ಚಾಲಕರು, ಟ್ಯಾಕ್ಸಿ ಸಂಘದ ಅಧ್ಯಕ್ಷರು ಹಾಗೂ ಮಾಲಿಕ- ಚಾಲಕರು, ಬೀದಿ ಬದಿ ವ್ಯಾಪಾರಸ್ಥರು ಮತ್ತು ನಗರದ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ- ಸೂಚನೆ ನೀಡಬಹುದು ಎಂದು ಸಂಚಾರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರು ತಿಳಿಸಿದ್ದಾರೆ. ------------

ಬಳ್ಳಾರಿ ಮಹಾನಗರ ಪಾಲಿಕೆ: ನಿವೇಶನ ಖರೀದಿ ಮಾಡದಂತೆ ಸೂಚನೆ

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯ ಅಂದ್ರಾಳ್ ಗ್ರಾಮದ ಸರ್ವೆ ನಂ:101/ಎ ರಲ್ಲಿ ಸಾರ್ವಜನಿಕರು ನಿವೇಶನಗಳನ್ನು ಖರೀದಿ ಮಾಡದಂತೆ ಪಾಲಿಕೆಯ ಉಪ ಆಯುಕ್ತರು (ಕಂದಾಯ) ತಿಳಿಸಿದ್ದಾರೆ. ಅಂದ್ರಾಳ್ ಗ್ರಾಮದ ಸರ್ವೆ ನಂ:101/ಎ ರ ಆಸ್ತಿಯು ಕರ್ನಾಟಕ ಸರ್ಕಾರದ ಮಾಲೀಕತ್ವದಲ್ಲಿರುವ ಸರ್ಕಾರಿ ಜಮೀನಾಗಿದ್ದು, ದುರುಗಣ್ಣ ತಂದೆ ಸಣ್ಣ ದುರುಗಪ್ಪ, ವಾರ್ಡ್ ನಂ:09, ರಾಮ ನಗರ, ಪೋಲಿ ಮಾರೆಮ್ಮ ಗುಡಿ ಹತ್ತಿರ, ಅಂದ್ರಾಳ್ ಬಳ್ಳಾರಿ ಇವರು ಬಳ್ಳಾರಿ ಮಹಾನಗರ ಪಾಲಿಕೆಯಿಂದ 2025 ರ ಮೇ ಮತ್ತು ಜೂನ್ ತಿಂಗಳಲ್ಲಿ ನಮೂನೆ-2ಎ ಅನಧಿಕೃತ ಬಿ-ಖಾತಾ ಪಡೆದು ಮಾರಾಟ ಮಾಡುವ ಕಾರ್ಯದಲ್ಲಿ ನಿರತರಾಗಿರುವುದು ಕಂಡುಬAದಿದೆ. ಹಾಗಾಗಿ ಸರ್ವೆ ನಂಬರ್ ನಲ್ಲಿರುವ ಯಾವುದೇ ನಿವೇಶನವನ್ನು ಸಾರ್ವಜನಿಕರು ಖರೀದಿಸಬಾರದು. ಒಂದುವೇಳೆ ಯಾವುದೇ ಸಾರ್ವಜನಿಕರು ಆ ಸರ್ವೆ ನಂಬರ್ ನ ನಿವೇಶನವನ್ನು ಖರೀದಿಸಿದಲ್ಲಿ ಪಾಲಿಕೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಬುಧವಾರ ನಗರದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಶಾಲೆ, ಶಿಕ್ಷಣ, ಆರೋಗ್ಯ, ವಸತಿ, ಕಂದಾಯ ಹಾಗೂ ವಿವಿಧ ಇಲಾಖೆಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಸಕಾಲದಲ್ಲಿ ಅಹವಾಲುಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು. ಇದಕ್ಕೂ ಮುನ್ನ ಸಂಸದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ವೀಲ್ ಚೇರ್, ತೋಟಗಾರಿಕೆ ಇಲಾಖೆಯಿಂದ ಎನ್‌ಹೆಚ್‌ಎಂ, ಪಿಎಂಕೆಎಸ್‌ವೈ ಯೋಜನೆಯಡಿ ಫಲಾನುಭವಿಗಳಿಗೆ ಟ್ರಾö್ಯಕ್ಟರ್, ಟ್ರಾö್ಯಕ್ಟರ್ ಟ್ರಾö್ಯಲಿ, ಟ್ರಾö್ಯಕ್ಟರ್ ಚಾಲಿತ ಸ್ಪೇಯರ್, ಹನಿ ನೀರಾವರಿ, ಸೋಲಾರ್ ಪಂಪ್ ಸೆಟ್ ವಿತರಣೆಯ ಆದೇಶ ಪ್ರತಿ ವಿತರಿಸಿದರು. ಬಳಿಕ ಸುಕನ್ಯಾ ಸಮೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಭಾಗ್ಯಲಕ್ಷಿö್ಮ ಬಾಂಡ್ ಆದೇಶ ಪ್ರತಿ, ಸಂಡೂರು ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಕಗೊಂಡವರಿಗೆ ಆದೇಶ ಪ್ರತಿ, ಆಯುಷ್ ಇಲಾಖೆಯಿಂದ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್. ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು. ----------

ಬಳ್ಳಾರಿ: ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ಹೇಳಿಕೆ | ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜನರ ಅಭಿವೃದ್ಧಿ ಸಾಧ್ಯ

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಮಾತ್ರ, ಜನರ ಅಭಿವೃದ್ಧಿ ಸಾಧ್ಯ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ಮೂರನೇ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ತಮ್ಮ ಇಲಾಖೆಗಳ ಸಮಗ್ರ ಮಾಹಿತಿಯನ್ನು ಕನ್ನಡಿಯಂತೆ ಸಿದ್ಧವಿಟ್ಟುಕೊಂಡು ಸಭೆಗಳಲ್ಲಿ ಪ್ರಸ್ತುತಪಡಿಸಬೇಕು. ಇದರಿಂದ ಜನರ ಅಭಿವೃದ್ಧಿಗೆ ಬೇಕಾದ ಸಮರ್ಪಕ ಅನುದಾನ ಕುರಿತು ಸರ್ಕಾರಗಳ ಮುಂದೆ ಪ್ರಸ್ತಾಪಿಸಲು ಸಾಧ್ಯವಾಗುತ್ತದೆ ಎಂದರು. *ಪಿಎಂಎಫ್‌ಎAಇ ಯೋಜನೆ ಸಾಕಾರಗೊಂಡಿಲ್ಲ:* ಅಸAಘಟಿತ ವಲಯದಲ್ಲಿನ ಸಣ್ಣ ಆಹಾರ ಸಂಸ್ಕರಣಾ ಘಟಕಗಳನ್ನು ಉತ್ತೇಜಿಸಲು, ಅವರಿಗೆ ಸಾಲ ಸೌಲಭ್ಯ ನೀಡಲು ಪ್ರಧಾನ ಮಂತ್ರಿ ಸೂಕ್ಷö್ಮ ಆಹಾರ ಸಂಸ್ಕರಣಾ ಉದ್ಯಮಗಳ ಯೋಜನೆಯಡಿ ಲೋನ್ ಗಾಗಿ ಸಲ್ಲಿಸಿದ ಅರ್ಜಿಗಳಲ್ಲಿ ಮಂಜೂರಾತಿಗಳಿಗಿAತ ತಿರಸ್ಕಾರಗೊಂಡಿರುವ ಅರ್ಜಿಗಳೇ ಹೆಚ್ಚಾಗಿದ್ದು, ಯಾವ ಕಾರಣಕ್ಕೆ ತಿರಸ್ಕಾರಗೊಂಡಿವೆ? ಎಂದು ಪ್ರಶ್ನಿಸಿದ ಸಂಸದರು, ಈ ಯೋಜನೆಯು ಜಿಲ್ಲೆಯಲ್ಲಿ ಸಾಕಾರಗೊಂಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಬ್ಯಾಂಕ್ ಅಧಿಕಾರಿಗಳಿಗೆ ರೈತರ ಮೇಲೆ ಕಾಳಜಿ ಇಲ್ಲ. ಅವರ ಹಣದಿಂದಲೇ ಬ್ಯಾಂಕ್ ಗಳು ವ್ಯವಹಾರ ನಡೆಸುತ್ತಿವೆ. ಮುಖ್ಯವಾಗಿ ಜಿಲ್ಲಾ ಲೀಡ್ ಬ್ಯಾಂಕ್ ಸಭೆಗಳು ನಡೆಯುತ್ತಿಲ್ಲ. ಕೃಷಿ, ತೋಟಗಾರಿಕೆ ಅಧಿಕಾರಿಗಳು ರೈತರ ಲೋನ್ ಅರ್ಜಿಗಳಿಗೆ ಸಂಬAಧಿಸಿದAತೆ ಬೇಕಾದ ಪೂರಕ ದಾಖಲೆಗಳ ಮಾಹಿತಿ ನೀಡಬೇಕು. ಬೆಳೆವಿಮೆ ನೋಂದಣಿಗೆ ಹೆಚ್ಚಾಗಿ ಕಾಳಜಿ ವಹಿಸಬೇಕು. ರೈತರ ಪ್ರೋತ್ಸಾಹಕ್ಕೆ ಬೆನ್ನೆಲುಬಾಗಬೇಕು ಎಂದರು. *ಮಾದರಿ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಿ:* ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಲಭ್ಯವಿರುವ ಶೆಡ್ ಬಳಕೆಯಾಗುತ್ತಿಲ್ಲ, ರಸ್ತೆಯಲ್ಲಿ ರೈತರು ಉತ್ಪನ್ನ ಮಾರಾಟ ಮಾಡುತ್ತಿದ್ದಾರೆ. ಅವರಿಗೆ ಅಲ್ಲಿಗೆ ಹೋಗುವಂತೆ ನಿರ್ದೇಶನ ನೀಡಬೇಕು. ಸಂಡೂರು ತಾಲ್ಲೂಕಿನಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಾಹನ ತೂಕ ಸೇತುವೆ ನಿರ್ಮಿಸಲಾಗಿದ್ದು, ನಿರ್ವಹಣೆ ಇಲ್ಲದೇ ತುಕ್ಕು ಹಿಡಿಯುತ್ತಿದೆ. ಕೇಂದ್ರ, ರಾಜ್ಯ ಅನುದಾನ ದುರ್ಬಳಕೆಯಾಗಿದೆ. ಜವಾಬ್ದಾರಿ ಇದೆಯೇ? ಎಂದು ಎಪಿಎಂಸಿ ಉಪನಿರ್ದೇಶಕರಿಗೆ ಪ್ರಶ್ನಿಸಿದರು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅತ್ಯಾಧುನಿಕ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಾಣ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಬೇಕು ಎಂದು ತಿಳಿಸಿದರು. *ಕಾಲೇಜುಗಳಿಗೆ ಸಿಸಿಟಿವಿ ಅಳವಡಿಸಲು ಸೂಚನೆ:* ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ ಕಂಡುಬರುತ್ತಿವೆ. ರಾತ್ರಿ ವೇಳೆ ಗಸ್ತು ಪಡೆ ಹೆಚ್ಚಿಸಬೇಕು. ಇಸ್ಪೀಟ್, ಜೂಜಾಟ, ಅಕ್ರಮ ದಂಧೆ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಎಸ್ಪಿಯವರಿಗೆ ಸೂಚಿಸಿದ ಸಂಸದರು, ನಗರದಲ್ಲಿ ಪದವಿ, ಪದವಿಪೂರ್ವ ಕಾಲೇಜುಗಳಲ್ಲಿ ರ‍್ಯಾಗಿಂಗ್ ಚಟುವಟಿಕೆ ಕಂಡುಬರುತ್ತಿದ್ದು, ಕಾಲೇಜು ಆವರಣಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು. *ಕಾಗದರಹಿತ ಸಭೆ ನಡೆಸಲು ಮುಂದಡಿ:* ಕೇAದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಿಗೆ ಹಂಚಿಕೆಯಾದ ಅನುದಾನ ಮಾಹಿತಿ, ಅನುಷ್ಠಾನದ ವಿವರ, ಕಾಮಗಾರಿ ಪ್ರಗತಿ ಹಾಗೂ ಅಧಿಕಾರಿಗಳ ಸಮಯ ಉಳಿತಾಯಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡು ತಹಶೀಲ್ದಾರ್, ತಾಪಂ ಇಓ ಗಳಿಗೆ ಎನ್‌ಎಂಡಿಸಿ ಸಿಎಎಸ್‌ಆರ್ ಅನುದಾನದಡಿ ಜೂನ್ ಒಳಗಾಗಿ ಟ್ಯಾಬ್ ವಿತರಿಸಲು ಮುಂದಡಿ ಇಡಲಾಗುವುದು. ಇದರಿಂದ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬಳ್ಳಾರಿಯಲ್ಲಿ ಪಾರ್ಲಿಮೆಂಟ್ ಮಾದರಿಯಲ್ಲಿ ಕಾಗದರಹಿತ ಡಿಜಿಟಲ್ ದಿಶಾ, ಕೆಡಿಪಿ ಸಭೆ ನಡೆಸಲಾಗುವುದು ಎಂದರು. ಸಮಗ್ರ ಶಿಕ್ಷಣ ಅಭಿಯಾನದಡಿ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕ್ರೀಡಾ ಸಾಮಾಗ್ರಿ ಖರೀದಿ, ಶಾಲೆಗಳಲ್ಲಿ ಪರಿಸರ ಹಸಿರುಕರಣ ಹಾಗೂ ಇತರೆ ಕೌಶಲ ತರಬೇತಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾದ ಅನುದಾನ ಮಾಹಿತಿ ನೀಡಬೇಕು ಎಂದು ಡಿಡಿಪಿಐ ಅಧಿಕಾರಿಗೆ ತಿಳಿಸಿದರು. ಸರ್ಕಾರಿ ಆಸ್ಪತೆಗಳಲ್ಲಿ ಔಷಧಿ ಕೊರತೆ ಇದೆ ಎಂಬುದರ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್ ಅವರು ಈಗಾಗಲೇ ಅಗತ್ಯ ಕ್ರಮ ವಹಿಸಿದ್ದಾರೆ. ಜಿಲ್ಲೆಯಲ್ಲಿ ಯಾವುದಾದರೂ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಕಂಡುಬAದಿದೆಯೇ? ಎಂದು ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ವಿಚಾರಿಸಿದರು. ಇದಕ್ಕೆ ಪ್ರತ್ರಿಕ್ರಿಯಿಸಿದ ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಔಷಧಿಗಳ ಕೊರತೆ ಕಂಡುಬAದಿಲ್ಲ ಎಂದು ಸಭೆಗೆ ತಿಳಿಸಿದರು. ನಗರದ ಟಿಬಿ ಸೆಂಟರ್ ಜಂಕ್ಷನ್ ನಿಂದ ಹೊರವಲಯದ ವೇಣಿವೀರಾಪುರ ಬಳಿಯ ಎನ್ ಹೆಚ್ ರಸ್ತೆಗೆ ಕೂಡುವಂತೆ 4 ಲೇನ್ ರಸ್ತೆ, ಅಲ್ಲಿಂದ (ವೇಣಿ ವೀರಾಪುರ ಬಳಿಯಿಂದ) ಸಿರುಗುಪ್ಪ ರಸ್ತೆಗೆ ತಲುಪುವ ರಿಂಗ್ ರೋಡ್ ನಿರ್ಮಾಣಕ್ಕೆ ಸಂಬAಧಿಸಿದAತೆ ಕೇಂದ್ರದಿAದ ಅನುಮತಿ ಪಡೆಯಲು ಸೂಕ್ತವಾದ ವೈಜ್ಞಾನಿಕ ವರದಿ ತಯಾರಿಸಿ ನೀಡುವಂತೆ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು. ಅದೇ ರೀತಿಯಾಗಿ ಬಳ್ಳಾರಿ- ಸಿರುಗುಪ್ಪ ಗೆ ಹೋಗುವ ರಸ್ತೆ ನಿರ್ಮಾಣ ಕಾಮಗಾರಿಗೆ ವೇಗ ನೀಡಬೇಕು ಎಂದು ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಬೇಸಿಗೆ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಆರ್‌ಓ ಘಟಕಗಳನ್ನು ದುರಸ್ತಿ ಮಾಡಿಟ್ಟುಕೊಳ್ಳಬೇಕು. ಕುಡಿಯುವ ನೀರಿಗೆ ಹಾಹಾಕಾರವಾಗದಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಕುರಿತು ಕಲಾವಿದರ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸರ್ಕಾರಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರಿಂದ ಸಮುದಾಯಗಳ ಮೇಲೆ ಪರಿಣಾಮ ಬೀರಲಿದೆ ಎಂದರಲ್ಲದೇ, ಅರಣ್ಯ ಹಕ್ಕು ಸಮಿತಿ ಬಗ್ಗೆ ಅರಿವು ಹೊಂದಬೇಕು. ಒಟ್ಟಾರೆ ಅಧಿಕಾರಿಗಳು ಮಾನವೀಯತೆಯ ಕೆಲಸ ಮಾಡಬೇಕು ಎಂದರು. ರಾಜ್ಯ ಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆರೋಗ್ಯ ನ್ಯೂನ್ಯತೆಗಳನ್ನು ಗುರುತಿಸಬೇಕು.ಇದರಿಂದ ಮಕ್ಕಳನ್ನು ಸದೃಢರನ್ನಾಗಿಸಲು ಕೈಗೊಳ್ಳಬಹುದಾದ ಯೋಜನೆಗಳನ್ನು ರೂಪಿಸಬಹುದು ಎಂದು ಅಭಿಪ್ರಾಯಪಟ್ಟರು. ಸಭೆಯಲ್ಲಿ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಸೂಕ್ತ-ಸಲಹೆ ಸೂಚನೆ ನೀಡಿದರು. ಈ ವೇಳೆ ಸಂಡೂರು ಶಾಸಕರಾದ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕ ವೈ.ಎಂ.ಸತೀಶ್, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್. ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್, ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಪಂ ಇಓ ಗಳು ಹಾಗೂ ಇತರರು ಉಪಸ್ಥಿತರಿದ್ದರು. -----------