ಬುಧವಾರ, ಫೆಬ್ರವರಿ 4, 2026
ಫೆ.07 ರಂದು ಜಾನಪದ ಸಂಗೀತ ಗಾಯನ ಮತ್ತು ಶಾಸ್ತಿçÃಯ ನೃತ್ಯ ಪ್ರದರ್ಶನ ಕಾರ್ಯಕ್ರಮ
ಬಳ್ಳಾರಿ,ಫೆ.04(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.07 ರಂದು ಸಂಜೆ 06 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯದ ನಾಡೋಜ ಸುಭದ್ರಮ್ಮ ಮಾನ್ಸೂರ್ ಬಯಲು ರಂಗಮAದಿರದಲ್ಲಿ ವಿಶೇಷ ಘಟಕ ಯೋಜನೆಯಡಿ ಕಲಿಕಾ ತರಬೇತಿ ಪಡೆದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕೀಯರ ವಸತಿ ನಿಲಯದ ವಿದ್ಯಾರ್ಥಿನಿಯರಿಂದ ಜಾನಪದ ಸಂಗೀತ ಗಾಯನ ಹಾಗೂ ಗಿರಿಜನ ಉಪಯೋಜನೆಯಡಿ ಕಲಿಕಾ ತರಬೇತಿ ಪಡೆದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಂದ ಶಾಸ್ತಿçÃಯ ನೃತ್ಯ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಲಬುರಗಿಯ ಕಲಬುರಗಿ ವಲಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಯಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್, ತರಬೇತಿ ಗುರುಗಳಾದ ಜಾನಪದ ಗಾಯಕ ಎಸ್.ಎಂ ಹುಲುಗಪ್ಪ, ನೃತ್ಯ ಕಲಾವಿದರಾದ ಡಿ.ಇಂದ್ರಾಣಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ