ಬುಧವಾರ, ಫೆಬ್ರವರಿ 11, 2026
ಫೆ.11, 12 ರಂದು ಕಂಪ್ಲಿ ಉತ್ಸವ
ಬಳ್ಳಾರಿ,ಫೆ.11(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.11 ಮತ್ತು 12 ರಂದು ಕಂಪ್ಲಿ ಉತ್ಸವ ಆಯೋಜಿಸಲಾಗಿದೆ.
ಫೆ.12 ರಂದು ಸಂಜೆ 06 ಗಂಟೆಗೆ ಕಂಪ್ಲಿ ಪಟ್ಟಣದ ಸುಂದರಿ ಸಕ್ಕರೆ ಕಾರ್ಖಾನೆ ಮೈದಾನದ ಗಂಡುಗಲಿ ಕುಮಾರರಾಮ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸುವರು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಎಸ್.ಶಿವರಾಜ ತಂಗಡಗಿ ಅವರು ಘನ ಉಪಸ್ಥಿತಿ ಇರುವರು.
ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆಗಿರುವ ಜೆ.ಎನ್.ಗಣೇಶ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರುಗಳಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯ ಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷಣ್, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸರಾವ್ ಸೇರಿದಂತೆ ಇತರರು ಭಾಗವಹಿಸುವರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುನಾಥ, ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಜಹೀರಾ ನಾಸೀಮ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್. ಕೆ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಕೆ.ಎಂ. ಗಾಯತ್ರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್. ಎನ್., ಸಹಾಯಕ ಆಯುಕ್ತ ರಾಜೇಶ್. ಹೆಚ್.ಡಿ ಸೇರಿದಂತೆ ಇತರರು ಉಪಸ್ಥಿತರಿರುವರು.
*ವಿವಿಧ ಕಾರ್ಯಕ್ರಮಗಳು:*
ಫೆ.11 ರಂದು ಮಧ್ಯಾಹ್ನ 03 ರಿಂದ 06 ಗಂಟೆಯವರೆಗೆ ಕಂಪ್ಲಿ ಕೋಟೆಯ ಪಂಪಾಪತಿ ದೇವಸ್ಥಾನದಿಂದ ಸೋಮಪ್ಪ ಕೆರೆಯವರೆಗೆ ಕಲಾ ತಂಡಗಳಿAದ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ 06 ರಿಂದ 07 ಗಂಟೆಯವರೆಗೆ ಐತಿಹಾಸಿಕ ಸೋಮಪ್ಪ ಕೆರೆ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಭರತ ನಾಟ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.
ಸಂಜೆ 07 ರಿಂದ 08 ಗಂಟೆಯವರೆಗೆ ಐತಿಹಾಸಿಕ ಸೋಮಪ್ಪ ಕೆರೆ ತಟದಲ್ಲಿ ತುಂಗಭದ್ರ ಆರತಿ ಮಹೋತ್ಸವ ಜರುಗಲಿದೆ. ಬಳಿಕ ರಾತ್ರಿ 08 ರಿಂದ 11 ಗಂಟೆಯವರೆಗೆ ಐತಿಹಾಸಿಕ ಸೋಮಪ್ಪ ಕೆರೆ ವೇದಿಕೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ ಸಾಧಕರಿಗೆ, ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಫೆ.12 ರಂದು ಕಂಪ್ಲಿ ಪಟ್ಟಣದ ಸುಂದರಿ ಸಕ್ಕರೆ ಕಾರ್ಖಾನೆ ಮೈದಾನದ ಗಂಡುಗಲಿ ಕುಮಾರರಾಮ ವೇದಿಕೆಯಲ್ಲಿ ಮಧ್ಯಾಹ್ನ 03 ರಿಂದ ಸಂಜೆ 06 ಗಂಟೆಯವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಸಂಜೆ 06 ರಿಂದ 07 ಗಂಟೆಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.
ಬಳಿಕ ರಾತ್ರಿ 07 ರಿಂದ 09 ಗಂಟೆಯವರೆಗೆ ರಾಜ್ಯ ಮಟ್ಟದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, 09 ರಿಂದ 11 ಗಂಟೆಯವರೆಗೆ ಚಂದನ್ ಶೆಟ್ಟಿ ಮತ್ತು ತಂಡದವರಿAದ ಸಂಗೀತ ಕಾರ್ಯಕ್ರಮ, ರಾತ್ರಿ 11 ರಿಂದ 12 ಗಂಟೆಯವರೆಗೆ ಬಾಣ ಬಿರುಸು ಪ್ರದರ್ಶನ, ರಾತ್ರಿ 12 ರಿಂದ ಆಸಕ್ತ ಸ್ಥಳೀಯ ಕಲಾವಿದರಿಂದ ಕಾರ್ಯಕ್ರಮಗಳು ನಡೆಯಲಿವೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)







ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ