ಬುಧವಾರ, ಫೆಬ್ರವರಿ 11, 2026
ಫೆ.12 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.11(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯದ ನಿಮಿತ್ತ ಮತ್ತು ದುರಸ್ತಿ, ಕಬ್ಬಿಣದ ಕಂಬಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಫೆ.12 ರಂದು ಬೆಳಿಗ್ಗೆ 09.30 ರಿಂದ ಸಂಜೆ 06.30 ಗಂಟೆಯವರೆಗೆ ಎಫ್-24 ಫೀಡರ್ ವ್ಯಾಪ್ತಿಯ ಬಂಡಿಮೋಟ್, ಬಾಪೂಜಿ ನಗರ, ಕುರಿಕಮೇಲ, ಕಮೇಲ ರಸ್ತೆ, ಬೆಂಗಳೂರು ರಸ್ತೆ, ತೇರು ಬೀದಿ, ಬ್ರೂಸ್ ಪೇಟೆ ಪೊಲೀಸ್ ಠಾಣೆ ಸೇರಿದಂತೆ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ