ಸೋಮವಾರ, ಫೆಬ್ರವರಿ 16, 2026

‘ನಮ್ಮ ಬಳ್ಳಾರಿ-ಸ್ವಚ್ಛ ಬಳ್ಳಾರಿ’ ಅಂಗವಾಗಿ ಫೆ.14 ರಂದು ಮ್ಯಾರಾಥಾನ್

ಬಳ್ಳಾರಿ,ಫೆ.13(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ 2025-26 ನೇ ಸಾಲಿಗೆ ‘ನಮ್ಮ ಬಳ್ಳಾರಿ-ಸ್ವಚ್ಛ ಬಳ್ಳಾರಿ’ ಅಂಗವಾಗಿ ಫೆ.14 ರಂದು ಬೆಳಿಗ್ಗೆ 06.30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಮ್ಯಾರಾಥಾನ್ ಓಟ ಹಮ್ಮಿಕೊಳ್ಳಲಾಗಿದೆ. *ಮಾರ್ಗ:* ಮ್ಯಾರಾಥಾನ್ ಓಟವು ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭಗೊಳ್ಳಲಿದ್ದು, ಗಡಿಗಿ ಚೆನ್ನಪ್ಪ ವೃತ್ತ, ಹೆಚ್.ಆರ್.ಗವಿಯಪ್ಪ ವೃತ್ತ, ವಾಲ್ಮೀಕಿ ವೃತ್ತ (ಎಸ್.ಪಿ ವೃತ್ತ), ದುರ್ಗಮ್ಮ ದೇವಸ್ಥಾನ ವೃತ್ತದ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದಿಂದ ಮರಳಿ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನಕ್ಕೆ ತಲುಪಿ ಅಂತ್ಯಗೊಳ್ಳಲಿದೆ. ಸ್ವಚ್ಛತೆ ಕುರಿತಾಗಿ ಅರಿವು ಮೂಡಿಸಲು ನಗರದ ಶಾಲಾ-ಕಾಲೇಜು ವಿದ್ಯಾರ್ಥಿ, ಸಾರ್ವಜನಿಕರಿಗೆ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ