ಸೋಮವಾರ, ಫೆಬ್ರವರಿ 16, 2026
ಫೆ.19 ರಂದು ಛತ್ರಪತಿ ಶ್ರೀ ಶಿವಾಜಿ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಫೆ.12(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಫೆ.19 ರಂದು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಸಭಾಂಗಣದಲ್ಲಿ ಛತ್ರಪತಿ ಶ್ರೀ ಶಿವಾಜಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯ ಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆಗ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪೊಲೀಸ್ ಇಲಾಖೆಯ ನಿವೃತ್ತ ಶಾಖಾಧೀಕ್ಷಕ ಎಂ ಶಿವಾಜಿರಾವ್ ಸೇರಿದಂತೆ ಇತರರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಸಂದ್ಯಾ ಕೋಲಾಚಲಂ ತಂಡದಿAದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.
*ಮೆರವಣಿಗೆ:*
ಜಯಂತಿ ಅಂಗವಾಗಿ ಅಂದು ಸಂಜೆ 04 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ರೇಲ್ವೆ ನಿಲ್ದಾಣ ರಸ್ತೆ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ