ಬುಧವಾರ, ಫೆಬ್ರವರಿ 18, 2026
ಫೆ.19 ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
ಬಳ್ಳಾರಿ,ಫೆ.18(ಕರ್ನಾಟಕ ವಾರ್ತೆ):
ಮುಂಬರುವ ಬೇಸಿಗೆಯ ಬಿಸಿಲಿನ ತಾಪಮಾನ ನಿಭಾಯಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ಫೆ.19 ರಂದು ಮಧ್ಯಾಹ್ನ 03.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಏರ್ಪಡಿಸಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ