ಶನಿವಾರ, ಫೆಬ್ರವರಿ 21, 2026

ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ

ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ): ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಫೆ.22 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ (ಪತ್ರಿಕೆ-01) ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 04.30 ರವರೆಗೆ (ಪತ್ರಿಕೆ-02) ಕಲ್ಯಾಣ ಕರ್ನಾಟಕ ವೃಂದದ ವಿವಿಧ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ