ಗುರುವಾರ, ಫೆಬ್ರವರಿ 19, 2026

ಫೆ.21 ರಂದು ಬೃಹತ್ ಉದ್ಯೋಗ ಮೇಳ

ಬಳ್ಳಾರಿ,ಫೆ.19(ಕರ್ನಾಟಕ ವಾರ್ತೆ): ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ವಿಜಯನಗರ ಕಾಲೇಜು ಹಾಗೂ ರೈಟ್‌ವೇ ಸೊಲ್ಯೂಷನ್, ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಫೆ.21 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಹೊಸಪೇಟೆಯ ವಿಜಯನಗರ ಕಾಲೇಜು ಆವರಣದಲ್ಲಿ ಜಿಲ್ಲಾ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ 50 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 2000 ಕ್ಕೂ ಹೆಚ್ಚು ವಿವಿಧ ಹುದ್ದೆಗಳ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್ ಸೇರಿದಂತೆ ಯಾವುದೇ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಿರುತ್ತಾರೆ. ನೋಂದಾಯಿಸಿಕೊಳ್ಳಲು https://forms.gle/xffk84NMQZEomds86 ಲಿಂಕ್ ಗೆ ಭೇಟಿ ನೀಡಬೇಕು. ಬಳ್ಳಾರಿ ಜಿಲ್ಲೆಯ ಎಲ್ಲಾ ನಿರುದ್ಯೋಗಿ ಯುವಕರು ಮತ್ತು ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ನೋಂದಾಯಿಸಿಕೊAಡ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ