ಗುರುವಾರ, ಫೆಬ್ರವರಿ 19, 2026

ಫೆ.21 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ

ಬಳ್ಳಾರಿ,ಫೆ.19(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಉಪವಿಭಾಗ-1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಫೆ.21 ರಂದು ಬೆಳಿಗ್ಗೆ 11.30 ಗಂಟೆಗೆ ನಗರ ಉಪ-ವಿಭಾಗ ಕಚೇರಿ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಏರ್ಪಡಿಸಲಾಗಿದ್ದು, ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ