ಸೋಮವಾರ, ಫೆಬ್ರವರಿ 9, 2026
ಫೆ.24 ರಂದು ಶ್ರೀ ಕನಕದುರ್ಗಮ್ಮ ದೇವಸ್ಥಾನ ಸಿಡಿಬಂಡಿ ರಥೋತ್ಸವ | ಅದ್ದೂರಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ,ಫೆ.09(ಕರ್ನಾಟಕ ವಾರ್ತೆ):
ಇದೇ ಫೆ.24 ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅಚ್ಚುಕಟ್ಟಾಗಿ-ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವ ಅಂಗವಾಗಿ ದೇವಸ್ಥಾನದ ಯಾತ್ರಿ ನಿವಾಸದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಅಧಿದೇವತೆಯ ಮಹೋತ್ಸವವನ್ನು ಸಂಪ್ರದಾಯದAತೆ ಆಚರಣೆಗೆ ಕ್ರಮ ವಹಿಸಬೇಕು. ಅಚ್ಚುಕಟ್ಟಾಗಿ ಆಯೋಜನೆ ಮಾಡುವ ಮೂಲಕ ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಸಂಬAಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ರಥೋತ್ಸವ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಸೇರಲಿದ್ದು, ಬರುವ ಸಾರ್ವಜನಿಕರು ಮತ್ತು ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಸರತಿ ಸಾಲಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ನೋಡಿಕೊಳ್ಳಬೇಕು. ನಗರದದಲ್ಲಿ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು. ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಬೇಕು ಎಂದು ತಿಳಿಸಿದರು.
ಮುಖ್ಯವಾಗಿ ಮಹೋತ್ಸವದಲ್ಲಿ ದೇವಸ್ಥಾನದ ಸುತ್ತಲೂ ಸುತ್ತುವ ಸಿಡಿಬಂಡಿ ರಥದಲ್ಲಿ ಸಾಕಷ್ಟು ಜನ ಹತ್ತುವುದು ಕಂಡುಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಕೆಲವರಿಗೆ ಮಾತ್ರ ಅನುಮತಿ ನೀಡಬೇಕು ಮತ್ತು ಅವರಿಗೆ ಗುರುತಿನ ಚೀಟಿ ನೀಡಬೇಕು ಎಂದರಲ್ಲದೇ, ಅಂದು ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಕ್ತಿ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚಿಸಿದರು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ನಗರದ ಆರಾಧ್ಯದೇವಿ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದರು.
ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಮಾತನಾಡಿ, ದೇವಸ್ಥಾನದ ನೈರ್ಮಲೀಕರಣಕ್ಕೆ ದೇವಸ್ಥಾನದ ಸುತ್ತಲು ಜಾತ್ರಾ ಪ್ರದೇಶವನ್ನು ನಿರಂತರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾರ್ವಜನಿಕರ ಆರೋಗ್ಯದ ವಿಚಾರಕ್ಕೆ ಸಂಬAಧಿಸಿದAತೆ ವೈದ್ಯಾಧಿಕಾರಿಗಳ ತಂಡ ಹಾಗೂ ಸೂಕ್ತ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು. ಅದರ ಜೊತೆಗೆ ಅಗತ್ಯ ಅಗ್ನಿಶಾಮಕದಳ ಸೇವೆ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಮಹೋತ್ಸವದಲ್ಲಿ ಕಟ್ಟೆಚ್ಚರ ವಹಿಸಲು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಟ್ರಾಫಿಕ್ ನಿರ್ವಹಣೆಗಾಗಿ ದೇವಸ್ತಾನದ ಸುತ್ತ-ಮುತ್ತಲಿನ ಪ್ರಮುಖ ರಸ್ತೆಗಳ ಸೂಕ್ತ ಸ್ಥಳದಲ್ಲಿ ಅವಕಾಶ ಮಾಡಲಾಗುತ್ತದೆ ಎಂದು ಬಳ್ಳಾರಿ ನಗರ ಡಿಎಸ್‌ಪಿ ನಂದಾರೆಡ್ಡಿ ಅವರು ಸಭೆಗೆ ತಿಳಿಸಿದರು.
ಸಾರ್ವಜನಿಕರು ಮತ್ತು ಭಕ್ತಾಧಿಗಳಿಗೆ ಸಾಲಿನಲ್ಲಿ ಬಂದು ದೇವಿಯ ದರ್ಶನ ಪಡೆಯಲು ಬ್ಯಾರಿಕೇಡ್ ವ್ಯವಸ್ಥೆ, ಸಿಡಿಬಂಡಿ ರಥೋತ್ಸವ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೂಕ್ತ ರಕ್ಷಣೆ ಕಲ್ಪಿಸಬೇಕು ಎಂದು ಜಿಲ್ಲಾ ಗಾಣಿಗ ಸಮುದಾಯದ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಜೇಶ್ ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಮಂಜುನಾಥ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಸವಿತಾ.ಹೆಚ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಗಾಣಿಗ ಸಮುದಾಯದವರು ಹಾಗೂ ಸಾರ್ವಜನಿಕರು, ಮತ್ತೀತರರು ಉಪಸ್ಥಿತರಿದ್ದರು.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ