ಮಂಗಳವಾರ, ಫೆಬ್ರವರಿ 17, 2026
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
ಬಳ್ಳಾರಿ,ಫೆ.17(ಕರ್ನಾಟಕ ವಾರ್ತೆ):
ಜಿಲ್ಲೆಯ ಅಧೀನದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆ ಇದ್ದಲ್ಲಿ ಮಾ.03 ರ ಸಂಜೆ 5.30 ರೊಳಗೆ ಸಂಬAಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರಪಾಲಿಕೆ, ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ, ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಯವರ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಸಲಾಗಿದೆ.
ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ