ಸೋಮವಾರ, ಫೆಬ್ರವರಿ 2, 2026

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಫೆ.02(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಓಟಿ ಕಾಂಪ್ಲೆಕ್ಸ್ ಆವರಣದಲ್ಲಿ ಸುಮಾರು 40 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೇ ಖಾಯಿಲೆಯಿಂದ ಬಳಲಿ ಜ.31 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ: ಅಂದಾಜು 5.8 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ತಲೆಯಲ್ಲಿ ಕಪ್ಪು ಕೂದಲು ಹೊಂದಿದ್ದು, ಮೈಮೇಲೆ ಬಿಳಿ ಮತ್ತು ಕಪ್ಪು ಗೆರೆಯುಳ್ಳ ಬೂದಿಬಣ್ಣದ ತುಂಬು ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ಸ್, ಗುಲಾಬಿ ಬಣ್ಣದ ಒಳಉಡುಪು, ನೀಲಿ ಬಣ್ಣದ ಬನಿಯನ್, ಕೆಂಪು ಬಣ್ಣದ ಉಡುದಾರ ಧರಿಸಿರುತ್ತಾನೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿಐ ಮೊ.9480803047, ಪಿಎಸ್‌ಐ ಮೊ.9480803084 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ