ಬುಧವಾರ, ಫೆಬ್ರವರಿ 18, 2026
ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ: ಆಹಾರ ವಾಹಿನಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಫೆ.18(ಕರ್ನಾಟಕ ವಾರ್ತೆ):
ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.03 ಲಕ್ಷ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್, ಹಣಕಾಸು ಸಂಸ್ಥೆಗಳಿAದ ಸಾಲ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಬಳ್ಳಾರಿ ನಗರ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿ ಬರುವ ವಿಶ್ವಕರ್ಮ ಸಮುದಾಯ ಮತ್ತು ಅದರ ಉಪಜಾತಿಗೆ ಸೇರಿದವರಾಗಿರಬೇಕು. ಮಾ.07 ಅರ್ಜಿ ಸಲ್ಲಿಸಲು ಕೊನೆಯ ದಿನ.
ಕುಟುಂಬದ ವಾರ್ಷಿಕ ವರಮಾನ ರೂ.3,00,000 ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒAದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ದಿ ನಿಗಮ(ನಿ), ಜಿಲ್ಲಾಡಳಿತ ಭವನ, ಬಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂ.53, ಅನಂತಪುರ ರಸ್ತೆ, ಬಳ್ಳಾರಿ ಕಚೇರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ದಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕ ಭಾವಿಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ