ಮಂಗಳವಾರ, ಫೆಬ್ರವರಿ 3, 2026

ನೋಂದಣಿ ಅವಧಿ ವಿಸ್ತರಣೆ

ಬಳ್ಳಾರಿ,ಫೆ.03(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಮುಂಗಾರು ಹಂಗಾಮಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳ ಉತ್ಪನ್ನಕ್ಕೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯ ಸರ್ಕಾರವು ರೈತರು ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಫೆ.13 ರ ವರೆಗೆ ಹಾಗೂ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ವೇದಿಕೆ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಮೂಲಕ ಮಾರಾಟ ಮಾಡಿಕೊಳ್ಳಲು ಫೆ.21 ಕೊನೆಯ ದಿನ ಎಂದು ಅವಧಿ ವಿಸ್ತರಿಸಿದೆ. ರೈತರು ನಿಗಧಿತ ಅವಧಿಯಲ್ಲಿ ನೋಂದಣಿ ಮತ್ತು ಮಾರಾಟ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ